Vijayapatha – ವಿಜಯಪಥ
Friday, November 1, 2024
NEWSದೇಶ-ವಿದೇಶನಮ್ಮರಾಜ್ಯಸಂಸ್ಕೃತಿ

ಸ್ವಚ್ಛನಗರ ಕೀರಿಟ ಮುಡಿಗೇರಿಸಿಕೊಂಡ ಮೈಸೂರು ನಗರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು:  ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯವು ರಾಷ್ಟ್ರಮಟ್ಟದಲ್ಲಿ ನಡೆಸಿದ 2019-20ನೇ ಸಾಲಿನ ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆಯಲ್ಲಿ ಮೈಸೂರು ನಗರವು 3 ರಿಂದ 10 ಲಕ್ಷ ಜನಸಂಖ್ಯೆಯುಳ್ಳ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಜೊತೆಗೆ ಜಿಲ್ಲೆಯ ಹುಣಸೂರು ನಗರಸಭೆ, ಪುರಸಭೆಗಳಾದ ಕೆ.ಆರ್.ನಗರ, ಹೆಚ್.ಡಿ.ಕೋಟೆ ಮತ್ತು ಪಿರಿಯಾಪಟ್ಟಣ ಪ್ರಶಸ್ತಿಗೆ ಆಯ್ಕೆಯಾಗಿವೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಗುರುವಾರ ಮೈಸೂರು ಅರಮನೆ ಆವರಣದಲ್ಲಿ ವರ್ಚುವಲ್ ಪ್ಲಾಟ್‍ಫಾರಂ ಮುಖಾಂತರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಮೈಸೂರು ನಗರವನ್ನು ದೇಶದ ಪ್ರಥಮ ಸ್ವಚ್ಛ ನಗರಿ ಪಟ್ಟಿಯಲ್ಲಿ ಪ್ರಥಮ ಹಾಗೂ ಸಮಗ್ರ ವಿಭಾಗದಲ್ಲಿ 5ನೇ ಸ್ಥಾನವನ್ನು ಪಡೆದುಕೊಂಡಿದೆ ಎಂದು ಘೋಷಿಸಿತು.

ಈ ವೇಳೆಯಲ್ಲಿ ಶಾಸಕ ಎಸ್.ಎ.ರಾಮದಾಸ್   ಮಾತನಾಡಿ, ಸ್ವಚ್ಛ ಸರ್ವೇಕ್ಷಣ್ ಅಭಿಯಾನದಲ್ಲಿ ಮೈಸೂರು ನಗರವು ಪ್ರಥಮ ಸ್ಥಾನಗಳಿಸಿದ್ದು ಹೆಮ್ಮೆಯ ವಿಚಾರ. ನಮ್ಮ ನಗರವನ್ನು ಮತ್ತಷ್ಟು ಸ್ವಚ್ಛತೆಯಿಂದ ಕಾಪಾಡುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದರು.

ಸ್ವಚ್ಛ ಸರ್ವೇಕ್ಷಣ್‍ನಲ್ಲಿ ಅನ್ವಯವಾಗುವಂಥ ಘನತ್ಯಾಜ್ಯ ನಿರ್ವಹಣೆ ಹಾಗೂ ನೈರ್ಮಲ್ಯ ಕಾಪಾಡುವ ಮುಂತಾದ ಮಾರ್ಗಸೂಚಿಗಳನ್ನು ಅನುಸರಿಸಿ, ಇಂದಿನಿಂದಲೇ ಮೈಸೂರು ನಗರವು ಮುಂದಿನ ಬಾರಿ ಮೊದಲ ಸ್ಥಾನವನ್ನು ಪಡೆಯುವುದಕ್ಕೆ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಸಂಸದ ಪ್ರತಾಪ ಸಿಂಹ  ಮಾತನಾಡಿ, ಮಹಾನಗರ ಪಾಲಿಕೆಯ ಅಧಿಕಾರಿಗಳು, ಪೌರಕಾರ್ಮಿಕರು ಹಾಗೂ ಸ್ಥಳಿಯ ಜನಪ್ರತಿನಿಧಿಗಳ ಶ್ರಮದಿಂದಾಗಿ ಮೈಸೂರು ನಗರವು ಸ್ವಚ್ಛನಗರಿ ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ. ಮುಂದಿನ ಬಾರಿ ಹೆಚ್ಚು ಅಂಕ ಗಳಿಸುವ ಮೂಲಕ ಮೈಸೂರನ್ನು ಭಾರತದ ಅತ್ಯಂತ ಸ್ವಚ್ಛನಗರಿಯ ಪಟ್ಟಿಗೆ ಸೇರಿಸಲು ನಾವು ಪ್ರಯತ್ನಿಸಬೇಕು ಎಂದರು.

ಇದಕ್ಕೂ ಮುನ್ನ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರು ಮೈಸೂರಿನ ಪೌರಕಾರ್ಮಿಕರೊಡನೆ ಸಂವಾದ ನಡೆಸಿದರು. ಈ ವೇಳೆ ಮಂಜುಳಾ ಅವರು ಸಂವಾದದಲ್ಲಿ ಮಾತನಾಡಿ, ಕಳೆದ 22 ವರ್ಷಗಳಿಂದ ಪೌರಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಮಹಾನಗರ ಪಾಲಿಕೆಯ ಅಧಿಕಾರಿಗಳು ನಮ್ಮ ಸುರಕ್ಷತೆಗೆ ಹೆಚ್ಚು ಗಮನ ನೀಡುತ್ತಿದ್ದಾರೆ. ಕೊರೊನಾ ಸೋಂಕು ಹರಡುವ ಮುನ್ನೆಚ್ಚರಿಕೆಯಿಂದ ನಮಗೆಲ್ಲರಿಗೂ ಮಾಸ್ಕ್, ಕೈ ಗವಸು ನೀಡಿದ್ದಾರೆ. ನಗರದಲ್ಲಿ ಇನ್ನೂ ಹೆಚ್ಚು ಸಮುದಾಯ ಶೌಚಾಲಯ ನಿರ್ಮಿಸಲು ಮನವಿ ಮಾಡಿದರು.

ನಂತರ ಎಂ.ನಂಜುಂಡಸ್ವಾಮಿ ಅವರು ಮಾತನಾಡಿ, ಕೊರೊನಾ ಸೋಂಕು ಹರಡುವ ಸಂದರ್ಭದಲ್ಲಿ ಕೆಲಸ ಮಾಡುವಾಗ ನನಗೂ ಸೋಂಕು ತಗುಲಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿ ಮರಳಿ ಕೆಲಸಕ್ಕೆ ಹಾಜರಾಗಿದ್ದೇನೆ. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಪಡೆಯುತ್ತಿದ್ದೇನೆ ಎಂದು ಹೇಳಿದರು.

ಮೇಯರ್ ತಸ್ನೀಂ, ಉಪ ಮೇಯರ್ ಸಿ.ಶ್ರೀಧರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಲೋಕನಾಥ್, ನಗರಪಾಲಿಕೆ ಆಯೋಗ್ಯಾಧಿಕಾರಿ ಡಾ.ಜಯಂತ್, ಡಾ.ನಾಗರಾಜು  ಇತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ