ಮೈಸೂರು: ಕೆಲಸದ ಒತ್ತಡ ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳದಿಂದ ಮನನೊಂದ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಅವರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದರು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೃತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಿದ್ದ ವೇಳೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಅವರ ಸಾವಿಗೆ ಹಿರಿಯ ಅಧಿಕಾರಿಗಳ ಒತ್ತಡವೇ ಕಾರಣ ಎಂದು ಆರೋಪಿಸಿ ವೈದ್ಯರು ಪ್ರತಿಭಟನೆ ಮಾಡಿ ಕಿರುಕುಳ ನೀಡಿದ ಅಧಿಕಾರಿಯ ವಿರುದ್ಧ ಕೇಸು ದಾಖಲಿಸಿ, ಅವರನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಕ್ಕೆ.ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚಿಸಿದ್ದಾರೆ.
ಇನ್ನು ಅಧಿಕಾರಿಗಳ ಕಿರುಕುಳದಿಂದ ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರೆ ಅಂಥ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದು, ಪ್ರಾದೇಶಿಕ ಆಯುಕ್ತರು 7 ದಿನದೊಳಗೆ ಈ ಬಗ್ಗೆ ತನಿಖೆ ಪೂರ್ಣಗೊಳಿಸಿ ವರದಿ ನೀಡುವಂತೆ ಸೂಚಿಸಿದ್ದಾರೆ.
ಮೈಸೂರಿನ ಆಲನಹಳ್ಳಿ ಬಡಾವಣೆಯ ತಮ್ಮ ನಿವಾಸದಲ್ಲಿ ಗುರುವಾರ ಬೆಳಗ್ಗೆ ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ನಜರಬಾದ್‌ನಲ್ಲಿರುವ ಡಿಎಚ್‌ಒ ಕಚೇರಿ ಡಾ. ನಾಗೇಂದ್ರ ಅವರ ಮೃತದೇಹವನ್ನು ಇರಿಸಿ ಪ್ರತಿಭಟನೆ ನಡೆಸಿ, ಕರ್ತವ್ಯದಲ್ಲಿನ ಒತ್ತಡ ಹಾಗೂ ಕಿರುಕುಳದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.