NEWSಕೃಷಿನಮ್ಮಜಿಲ್ಲೆ

ಸಿರಿಧಾನ್ಯ ಸೇವನೆಯಿಂದ ಆರೋಗ್ಯ ವೃದ್ಧಿ: ಸಚಿವ ಕೆ.ಎಚ್.ಮುನಿಯಪ್ಪ

ವಿಜಯಪಥ ಸಮಗ್ರ ಸುದ್ದಿ
  • ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ: ಚಾಲನೆ ನೀಡಿದ ಸಚಿವರು

ಬೆಂಗಳೂರು ಗ್ರಾಮಾಂತರ: ಆಧುನಿಕ ಜೀವನ ಶೈಲಿಯಿಂದ ಮುನುಷ್ಯನ ಆಯಸ್ಸು ಕ್ಷೀಣಿಸುತ್ತಿದೆ, ನಮ್ಮ ಆರೋಗ್ಯವನ್ನು ಸಮತೋಲನದಿಂದ ಕಾಪಾಡಿಕೊಳ್ಳಲು ಸಾಂಪ್ರದಾಯಿಕ ಪದ್ದತಿಯ ಸಿರಿಧಾನ್ಯಗಳ ಆಹಾರ ಸೇವನೆಗೆ ಮರಳಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.

ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿರುವ “ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ” ಕಾರ್ಯಕ್ರಮಕ್ಕೆ ಇಂದು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ದಿನಂಪ್ರತಿ ನವಣೆ, ಸಜ್ಜೆ, ಉದ್ದು, ರಾಗಿ ಮತ್ತು ಜೋಳದಂತ ಸಿರಿಧಾನ್ಯ ಆಹಾರ ಸೇವನೆ ರೂಡಿಸಿಕೊಳ್ಳುವದು ಅಗತ್ಯ. ಭಾರತದಲ್ಲಿ ಹಿಂದಿನ ಕಾಲದಲ್ಲಿ ಪೂರ್ವಜರು 75 ಭಾಗದಷ್ಟು ಕೃಷಿ ಕೆಲಸದಲ್ಲಿ ತೊಡಗಿ, ಈ ಸಿರಿಧಾನ್ಯ ಪದಾರ್ಥಗಳ ಗುಣಮಟ್ಟದ ಆಹಾರ ಹಾಗೂ ಹಣ್ಣು-ಹಂಪಲು ಸೇವಿಸುತ್ತಾ, ಗಟ್ಟಿ ಶರೀರದಿಂದ 100 ವರ್ಷ ಜೀವಿಸುತ್ತಿದ್ದರು. ಅಂದಿನ ಆಹಾರ ಪದ್ಧತಿಯಿಂದ ಸಮತೋಲನ ಜೀವನ ನಡೆಸಲು ಸಾಧ್ಯವಾಗುತ್ತಿತ್ತು ಎಂದರು.

ಇಂದಿನ ಪೀಳಿಗೆ ಫಾಸ್ಟ್‌ ಫುಡ್‌ ಸೇವನೆ ಮೊರೆ ಹೋಗುತ್ತಿದ್ದಾರೆ. ತಿನ್ನಲು ರುಚಿ ರುಚಿಯಾಗಿದ್ದರು ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಇಂದಿನ ಯುವಪೀಳಿಗೆ ಸಿರಿಧಾನ್ಯಗಳ ಆಹಾರ ಸೇವನೆ ಬಗ್ಗೆ ಜಾಗೃತಿ ಅತ್ಯವಶ್ಯವಾಗಿದೆ ಎಂದು ಹೇಳಿದರು.

ಇನ್ನು ಬರ್ತ್ ಡೇ ಸಮಯದಲ್ಲಿ ಮಕ್ಕಳಿಗೆ ಕೇಕ್ ಬದಲು ಸಿರಿಧಾನ್ಯ, ಹಾಲು, ರಾಗಿ ಮಾಲ್ಟ್ ಸೇವನೆಗೆ ಉತ್ತೇನ ನೀಡಬೇಕು. ಇದರಿಂದ ಮಕ್ಕಳ ರೋಗನಿರೋಧಕ ಶಕ್ತಿ ವೃದ್ಧಿಗೂ ಸಹಕಾರಿಯಾಗುತ್ತದೆ. ಇದರ ಅರಿವು ಮೂಡಿಸುವ ಜವಾಬ್ದಾರಿ ಪ್ರತಿಯೊಬ್ಬ ಪಾಲಕರ ಮೇಲಿದೆ ಎಂದು ಸಚಿವರು ಕಿವಿ ಮಾತು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಆರೋಗ್ಯ ವೃದ್ಧಿಸುವ ಸಿರಿಧಾನ್ಯಗಳಿಗೆ ಹೆಚ್ಚಿನ ಒತ್ತು ನೀಡಿ, ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹಿಸುತ್ತಿದೆ ಎಂದರು.

ದೇವನಹಳ್ಳಿ ಟೌನ್ ಕ್ರೀಡಾಂಗಣದಿಂದ ನಗರದ ವಿವಿಧ ರಸ್ತೆಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಸಿರಿಧಾನ್ಯ ಜಾಗೃತಿ ನಡಿಗೆ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ರಾಜಣ್ಣ, ತಾಲೂಕು ಅಧ್ಯಕ್ಷ ಸಿ.ಜಗನ್ನಾಥ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕಲಾವತಿ, ಸಹಾಯಕ ನಿರ್ದೇಶಕರಾದ ಸುಶೀಲಮ್ಮ, ಕೆಪಿಸಿಸಿ ಸದಸ್ಯ ಚಿನ್ನಪ್ಪ, ತಹಸೀಲ್ದಾರ್ ಅನಿಲ್ ಕುಮಾರ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷಎಸ್. ರವಿಕುಮಾರ್ ಸೇರಿ ಕೃಷಿಕ ಸಮಾಜದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು.

Megha
the authorMegha

Leave a Reply

error: Content is protected !!
Latest news
ಕರೆಂಟ್‌ ಬಿಲ್‌: ವಿದ್ಯುತ್ ವಿತರಣಾ ಕಂಪನಿಗಳ ಅನ್ಯಾಯದ ಬಿಲ್ಲಿಂಗ್ ಪದ್ಧತಿಗೆ ಬ್ರೇಕ್‌- KERC ಆದೇಶ ಪಾಲನೆಗೆ ಗ್ರಾಹಕರ... ಗೃಹಲಕ್ಷ್ಮಿಯೋಜನೆಗೆ ಮತ್ತೆ ಹೊಸದಾಗಿ ಅರ್ಜಿ ಸ್ವೀಕರಿಸುವ ಚಿಂತನೆಯಲ್ಲಿ ಸರ್ಕಾರ! ಮೂರು ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲು ಸರ್ಕಾರ ನಿರ್ಧಾರ: ಸಾರಿಗೆ ಸಚಿವ ಬೈರತಿ ... ಹಣ ದುರುಪಯೋಗ, ಕರ್ತವ್ಯ ಲೋಪ ಎಸಗಿದ ಆರೋಪ ಸಾಬೀತು: ಮಹೇಶ್ ಜೋಶಿ ಕಸಾಪ ಆಜೀವ ಸದಸ್ಯತ್ವ ರದ್ದು ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು...