NEWSನಮ್ಮರಾಜ್ಯರಾಜಕೀಯ

ಸಿಎಂ ಬಿಎಸ್‌ವೈ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲವೇ : ಎಎಪಿಯ ಉಷಾ ಮೋಹನ್ ಪ್ರಶ್ನೆ

ಕಳಂಕಿತ ಶಾಸಕ ರಮೇಶ್ ಜಾರಕಿಹೊಳಿ ಬಂಧಿಸಲು ಆಗ್ರಹಿಸಿ ಮಾ.17 ರಂದು ಆಮ್ ಆದ್ಮಿ ಪಕ್ಷ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕಳಂಕಿತ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಸಿ (ಮಾ.17) ನಾಳೆ 11 ಗಂಟೆಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ದತ್ತಾತ್ರೇಯ ನಗರ ಮಹಿಳಾ ಘಟಕದ ಅಧ್ಯಕ್ಷೆ ಉಷಾ ಮೋಹನ್ ಹೇಳಿದ್ದಾರೆ.

ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಮೇಶ್ ಜಾರಕಿಹೊಳಿ ಅವರನ್ನು ರಕ್ಷಿಸುವ ಸಲುವಾಗಿ ಯಡಿಯೂರಪ್ಪ ಎಸ್‌ಐಟಿ ತನಿಖೆಗೆ ಲೈಂಗಿಕ ಕಿರುಕುಳ ಹಗರಣವನ್ನು ನೀಡಿದ್ದಾರೆ ಹೊರತು ನಿಜವಾದ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಸಲುವಾಗಿ ಅಲ್ಲ. ಆದ ಕಾರಣ ಈ ಕೂಡಲೇ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಈ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕೆಲಸ ಕೊಡಿಸುವುದಾಗಿ ಯುವತಿಯೊಬ್ಬಳನ್ನು ನಂಬಿಸಿ, ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಕುರಿತು ದಾಖಲೆ ಸಮೇತ ದೂರು ನೀಡಿದ್ದರೂ ಸಹ ಸರ್ಕಾರ ಮತ್ತು ಆಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ದೂರು ನೀಡಿದವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯಲಾಗಿದೆ. ಸಿಡಿಯಲ್ಲಿರುವ ದೃಶ್ಯಾವಳಿ ನಿಜ ಎನ್ನುವುದಾದರೆ ರಮೇಶ್ ಜಾರಕಿಹೊಳಿ ಅವರು ಸಹ ತಪ್ಪಿತಸ್ಥರಲ್ಲವೇ ಎಂದು ಪ್ರಶ್ನಿಸಿದರು.

ಇತ್ತೀಚೆಗೆ ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿ ವಿಡಿಯೋ ಬಿಡುಗಡೆ ಮಾಡಿ, ತನಗೆ ರಕ್ಷಣೆ ನೀಡಬೇಕು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದಾರೆ. ಆದರೆ ಸರ್ಕಾರ ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಿಗೆ ಎಫ್ ಐಆರ್ ದಾಖಲಿಸದೆಯೇ ಕಾನೂನುಬಾಹಿರವಾಗಿ ಎಸ್ಐಟಿ ರಚನೆಮಾಡಿದೆ ಎಂದರು.

ಸರ್ಕಾರಕ್ಕೆ ಈಗ ಇರುವ ಕುತೂಹಲ ವಿಡಿಯೋ ಮಾಡಿದ್ದು ಯಾರು ಎಂದು ಕಂಡುಹಿಡಿಯುವುದೇ ಆಗಿದೆ. ಆರೋಪಿ ರಮೇಶ್ ಜಾರಕಿಹೊಳಿ ಅವರ ಮೇಲೆ ಕ್ರಮ ಕೈಗೊಳ್ಳುವುದಾಗಲೀ ಅಥವಾ ಸಂತ್ರಸ್ತ ಯುವತಿಗೆ ರಕ್ಷಣೆ ಕೊಡುವುದಾಗಲೀ ಅಲ್ಲ ಎಂಬುದು ಸರ್ಕಾರದ ಧೋರಣೆಯಿಂದ ತಿಳಿದು ಬರುತ್ತಿದೆ ಎಂದು ಹೇಳಿದರು.

ವಿಡಿಯೋ ನಕಲಿ ಎಂದಾದರೆ ಇಡೀ ದೇಶದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಅಪರಾಧ ಕಂಡುಹಿಡಿಯುವ ಲ್ಯಾಬ್‌ಗಳಿವೆ ಅವುಗಳಿಗೆ ಸಿಡಿ ಕಳಿಸಿ ಅನುಮಾನ ಬಗೆಹರಿಸಬಹುದಲ್ಲವೇ? ಆದರೂ ಸರ್ಕಾರದ ಈ ಧೋರಣೆ ಅನುಮಾನ ಮೂಡಿಸುವಂತಿಂದೆ. ಪ್ರಭಾವಿ ರಾಜಕಾರಣಿಯನ್ನು ರಕ್ಷಿಸುವ ಹುನ್ನಾರ ಎಂದರು.

ಯಡಿಯೂರಪ್ಪನವರ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲವೇ? ತಪ್ಪಿತಸ್ಥರಿಗೆ ಶೀಕ್ಷೆಯಾಗುವುದಿಲ್ಲವೇ? ಬಲಿಪಶುಗಳಿಗೆ ನ್ಯಾಯ ಸಿಗುವುದಿಲ್ಲವೇ? ಸರ್ಕಾರವು ಈ ಕೂಡಲೆ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಸಂತ್ರಸ್ತ ಯುವತಿಗೆ ರಕ್ಷಣೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷವು ಒತ್ತಾಯಿಸುತ್ತದೆ ಎಂದರು.

ಯೋಗಿತಾ ರೆಡ್ಡಿ ಇದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...