NEWSಸಂಸ್ಕೃತಿ

BBMP: ವಿಶೇಷ ರೀತಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಮುಖ್ಯ ಆಯುಕ್ತ ಕರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಲ್ಲ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರಿಗೆ ಆದೇಶಿಸಿದ್ದಾರೆ.

ಈಗಾಗಲೇ ಕಾರ್ಯಕ್ರಮದ ಸ್ವರೂಪ ಸಿದ್ಧಪಡಿಸಲಾಗಿದ್ದು, ಇಡೀ ರಾಜ್ಯದಲ್ಲಿ ಈ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸೂಚನೆಗಳನ್ನು ನೀಡಲಾಗಿದೆ. ಅದರಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಯೂ ಸಹ ಈ ಕೆಳಕಂಡ ಅಂಶಗಳ ಬಗ್ಗೆ ಗಮನ ಹರಿಸಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ವಿವರಿಸಿದರು.

1.ಪಿ ವ್ಯಾಪ್ತಿಯಲ್ಲಿ ನವೆಂಬರ್ 1 ರಂದು ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮ ವೇಳಾಪಟ್ಟಿಯಲ್ಲಿರುವಂತೆ ಧ್ವಜಾರೋಹಣ ರಾಷ್ಟ್ರಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ನಂತರ ಕ್ರಮವಾಗಿ ಈ ಕೆಳಗಿನ 05 ಕನ್ನಡ ಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸುವುದು.

(ಅ) ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು – ಹುಯಿಲಗೊಳ ನಾರಾಯಣರಾಯರು. (ಆ) ಎಲ್ಲಾದರು ಇರು ಎಂತಾದರು ಇರು – ಕುವೆಂಪು. (ಇ) ಒಂದೇ ಒಂದೇ ಕರ್ನಾಟಕ ಒಂದೇ – ದ.ರಾ.ಬೇಂದ್ರೆ. (ಈ) ಹೊತ್ತಿತೋ ಹೊತ್ತಿತೋ ಕನ್ನಡದ ದೀಪ – ಸಿದ್ದಯ್ಯ ಪುರಾಣಿಕ. (ಉ) ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ – ಚನ್ನವೀರಕಣವಿ.

2. ನವೆಂಬರ್ 1 ರಂದು ಬೆಂಗಳೂರು ನಗರದ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು. ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯುವಂತೆ ನಾಗರಿಕರಲ್ಲಿ ಮನವಿ ಮಾಡುವುದು.

3. ನವೆಂಬರ್ 1ರ ಬೆಳಗ್ಗೆ 9 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡ ಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ ನಾಗರೀಕರು ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡ ಗೀತೆಗೂ ಗೌರವ ಸಲ್ಲಿಸಲು ಮನವಿ ಮಾಡುವುದು.

4. ನವೆಂಬರ್ 1ರ ಸಂಜೆ 5.00 ಗಂಟೆಗೆ ಬೆಂಗಳೂರು ನಗರದ ಎಲ್ಲಾ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಲು ಮನವಿ ಮಾಡುವುದು. 5. ನವೆಂಬರ್ 1ರ ಸಂಜೆ 7.00 ಗಂಟೆಗೆ ಬೆಂಗಳೂರು ನಗರದ ಎಲ್ಲಾ ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವುದು.

ಈ ಎಲ್ಲಾ ಕಾರ್ಯಕ್ರಮಗಳನ್ನು ಬೆಂಗಳೂರು ನಗರದ ಆಟದ ಮೈದಾನಗಳು, ಉದ್ಯಾನವನಗಳು, ಕೆರೆ ಆವರಣ, ಅಪಾರ್ಟ್‌ಮೆಂಟ್‌ಗಳು, ಮಾಲ್‌ಗಳು ಹಾಗೂ ಪ್ರಮುಖ ಸ್ಥಳಗಳಲ್ಲಿಯೂ ಸಹ ಆಚರಿಸಬೇಕಾಗಿರುವುದರಿಂದ ಬೆಂಗಳೂರು ನಗರದ ಸಂಘ ಸಂಸ್ಥೆಗಳು, ಅಪಾರ್ಟ್‌ಮೆಂಟ್‌ಗಳ ಯೂನಿಯನ್‌ಗಳು, ಹೋಟೆಲ್ ಯೂನಿಯನ್‌ಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗ ಪಡೆದು ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ