ನಮ್ಮಜಿಲ್ಲೆ

CM BSY ಕಿಮ್ಸ್ ಭೇಟಿ: ಪಾಟೀಲ ಪುಟ್ಟಪ್ಪ ಆರೋಗ್ಯ ವಿಚಾರಣೆ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ:   ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ( ಕಿಮ್ಸ್ ) ಯಲ್ಲಿ ಕಳೆದ ಫೆ.10 ರಿಂದ ಚಿಕಿತ್ಸೆ ಪಡೆಯುತ್ತಿರುವ , ಹಿರಿಯ ಪತ್ರಕರ್ತ, ರಾಜ್ಯಸಭೆ ಮಾಜಿ ಸದಸ್ಯ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಖುದ್ದಾಗಿ ಭೇಟಿ ನೀಡಿ ವಿಚಾರಿಸಿದರು.

ಕಿಮ್ಸ್ ನಲ್ಲಿ ಪಾಟೀಲ ಪುಟ್ಟಪ್ಪನವರಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದೆ.ಸಾಧ್ಯವಾದಷ್ಟು ಇನ್ನೂ ಹೆಚ್ಚಿನ ಪ್ರಯತ್ನ ಮಾಡಿ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

 ಕಿಮ್ಸ್ ವೈದ್ಯಶಾಸ್ತ್ರ ಒಳರೋಗಿ ವಿಭಾಗದಲ್ಲಿ ದಾಖಲಾಗಿರುವ ನಾಡೋಜ ಪಾಪು ಅವರು, ವಿಪರೀತ ಜ್ವರ,ಉಸಿರಾಟ ತೊಂದರೆ ಹಾಗೂ ಆಯತಪ್ಪಿ ಬಿದ್ದ ಪರಿಣಾಮ ತಲೆಗೆ ಪೆಟ್ಟಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ದೀರ್ಘ ಕಾಲದ ಪುಪ್ಪಸ ತೊಂದರೆ ಹಾಗೂ ತಲೆಯಲ್ಲಿ ರಕ್ತಸ್ರಾವ ಉಂಟಾಗಿದ್ದರಿಂದ ಚಿಕಿತ್ಸೆ ಮಾಡಲಾಗಿದೆ.ಕಿಡ್ನಿ ತೊಂದರೆ, ರಕ್ತ ಹೀನತೆ ಹಾಗೂ ಸೋಂಕು ಕಂಡು ಬಂದಿದ್ದು ಎಲ್ಲಾ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗಿದೆ.ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದರಿಂದ ಶಸ್ತ್ರಚಿಕಿತ್ಸೆ ಮಾಡಲಾಯಿತು ಶಸ್ತ್ರಚಿಕಿತ್ಸೆ ನಂತರ ಆರೋಗ್ಯ ಗಂಭೀರವಾಗಿದೆ.ಕೃತಕ ಉಸಿರಾಟ ಯಂತ್ರ ( ವೆಂಟಿಲೇಟರ್) ಅಳವಡಿಸಲಾಗಿದೆ.ದೀರ್ಘ ಕಾಲ ಹಾಸಿಗೆ ಹಿಡಿದ ಪರಿಣಾಮ ಪಲ್ಮನರಿ ಥ್ರಂಬೋ ಎಂಬೋಲಿಸಂ ಆಗಿದೆ ಎಂದು ತಜ್ಞ ವೈದ್ಯ ಪ್ರೊ.ಡಿ.ಎಂ.ಕಬಾಡಿ ವಿವರಿಸಿದರು.

ಪಾಟೀಲ ಪುಟ್ಟಪ್ಪನವರ ಮಕ್ಕಳಾದ ಅಶೋಕ, ಮಂಜುಳಾ ಹಾಗೂ ಶೈಲಜಾ ಅವರಿಂದಲೂ ಮುಖ್ಯಮಂತ್ರಿಗಳು ಮಾಹಿತಿ ಪಡೆದರು.

ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಗೃಹಸಚಿವ ಬಸವರಾಜ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆ, ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್, ಜಿಲ್ಲಾಧಿಕಾರಿ ದೀಪಾ ಚೋಳನ್, ಪೊಲೀಸ್ ಆಯುಕ್ತ ಆರ್.ದಿಲೀಪ್,ಜಿಪಂ ಸಿಇಓ ಡಾ.ಬಿ.ಸಿ.ಸತೀಶ, ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂತರಠಾಣಿ, ವೈದ್ಯಕೀಯ ನಿರ್ದೇಶಕ ಡಾ.ಅರುಣಕುಮಾರ್, ಮುಖ್ಯ ಆಡಳಿತಾಧಿಕಾರಿ ರಾಜಶ್ರೀ ಜೈನಾಪುರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ