CrimeNEWSನಮ್ಮಜಿಲ್ಲೆ

HAVERI: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್‌ – ಅದೃಷ್ಟವಶಾತ್ ಎಲ್ಲರೂ ಪಾರು

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ವೊಂದು ಪಲ್ಟಿಯಾದ ಪರಿಣಾಮ 7 ಮಂದಿ ಗಾಯಗೊಂಡಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದ ಲಂಡೇನಹಳ್ಳಕ್ಕೆ ಬಸ್‌ ಬಿದಿದ್ದರಿಂದ ಈ ಅವಘಡ ಸಂಭವಿಸಿದೆ. ಈ ವೇಳೆ ಗಾಯಗೊಂಡವರಿಗೆ ಬಂಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಗದಗ ದಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಬಸ್ ಪಲ್ಟಿಯಾದೆ. ಬಸ್ ಹಳ್ಳಕ್ಕೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಬಸ್ಸಿನಲ್ಲಿದ್ದವರನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸಿದ್ದಾರೆ.

ಹಳ್ಳದಲ್ಲಿ ಭಾರೀ ಪ್ರಮಾಣದ ನೀರು ಇಲ್ಲದಿದ್ದರಿಂದ ದೊಡ್ಡ ದುರಂತ ತಪ್ಪಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ