NEWSನಮ್ಮಜಿಲ್ಲೆನಮ್ಮರಾಜ್ಯ

ಜ.29ರಂದು KSRTC ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಮಿತಿ ಪುನರ್‌ ರಚನೆ  ಸಭೆ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಅಧಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಮಿತಿ ಪುನರ್‌ ರಚನೆ   ಸಭೆ ಕರೆಯಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎ.ಸೋಮಣ್ಣ ತಿಳಿಸಿದ್ದಾರೆ.

ಇದೇ ಜ.29ರಂದು ಬೆಳಗ್ಗೆ 9.30ಕ್ಕೆ ತುಮಕೂರಿನ ಎಂ.ಜಿ.ರಸ್ತೆಯಲ್ಲಿರುವ ಜಿಲ್ಲಾಬಾಲ ಭವನದಲ್ಲಿ ಸಂಘದ ರಾಜ್ಯಾಧ್ಯಕ್ಷ ಎಂ. ದೇವದಾಸ್‌ ಅವರ  ಅಧ್ಯಕ್ಷತೆಯಲ್ಲಿ  ರಾಜ್ಯ ಸಮಿತಿ ಸರ್ವ ಸದಸ್ಯರ ಸಭೆ ನಡೆಯಲಿದೆ.

ಸಂಘದ ಹಿರಿಯ ಸಲಹೆಗಾರರಾದ ಡಾ.ಆರ್‌. ಮೋಹನ್‌ ರಾಜ್‌, ಕಾರ್ಯಾಧ್ಯಕ್ಷ ಡಿ.ಸಿದ್ದರಾಜು, ಹಿರಿಯ ಉಪಾಧ್ಯಕ್ಷರಾದ ಎಸ್.ಆರ್.ಆದರ್‌ಗುಂಜಿ, ಶಿವಶಾಂತ್‌ ಎಂ. ಮುನ್ನಳ್ಳಿ, ಸಂಘದ ಹಿರಿಯರಾದ ಎಂ. ಮಲ್ಲಿಕಾರ್ಜುನ  ಮೂರ್ತಿ, ಶಿವಣ್ಣ ಚಿಕ್ಕಣ್ಣನವರ್, ಹಿರಿಯ ವಕೀಲರು, ಧಾರವಾಡ ಇವರು ಉಪಸ್ಥಿತರಿರಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಂಘದ ರಾಜ್ಯ ಕೇಂದ್ರ ಸಮಿತಿಯ ಬಹುಮತದ ತೀರ್ಮಾನದಂತೆ ಸಂಘದ ಕಾರ್ಯ ಚಟುವಟಕೆಗಳನ್ನು  ಸುಗಮವಾಗಿ ನಡೆಸುವ ಸಲುವಾಗಿ, ಮುಂದಿನ ಅವಧಿಗಾಗಿ  ರಾಜ್ಯ ಸಮಿತಿ ಪುನರ್‌ ರಚನೆ  ಸಭೆಯನ್ನು ಕರೆಯಲಾಗಿದೆ.

ಆದ್ದರಿಂದ KSRTC, BMTC, NWKRTC ಮತ್ತು KKRTC ರಾಜ್ಯ, ವಲಯ, ವಿಭಾಗೀಯ, ಘಟಕ ಸಮಿತಿಯ ಸಂಘದ ಎಲ್ಲ ಸರ್ವ ಸದಸ್ಯರು ತಪ್ಪದೇ ಸಕಾಲಕ್ಕೆ ಆಗಮಿಸಿ ರಾಜ್ಯ ಸಮಿತಿ ಪುನರ್‌ ರಚನೆ ಸಭೆಯ ಕಾರ್ಯ ಕಲಾಪಗಳನ್ನು ಯಶಸ್ವಿಗೊಳಿಸಿಕೊಡಬೇಕೆಂದು ಈ ಮೂಲಕ ಮನವಿ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ