CrimeNEWS

MANDYA- ಅತ್ತಿಗೆ ಕೊಂದ ನಾದಿನಿ: ಬಳಿಕ ಆಕೆಯೂ ನೇಣಿಗೆ ಶರಣು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ಅತ್ತಿಗೆ ತಲೆ ಮೇಲೆ ಕಲ್ಲು ಎತ್ತುಹಾಕಿ ಕೊಲೆ ಮಾಡಿದ ನಾದಿನಿ ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶನಿವಾರ ಘಟನೆ ನಡೆಸಿದ್ದು, ಗ್ರಾಮದ ಪ್ರಿಯಾಂಕಾ(35) ಹತ್ಯೆಯಾದವರು. ಗೀತಾ(25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಗಿರೀಶ್ ಎಂಬುವರ ಪತ್ನಿ ಪ್ರಿಯಾಂಕಾ ಮತ್ತು ಸಹೋದರಿ ಗೀತಾ ನಡುವೆ ಸಣ್ಣಪುಟ್ಟ ವಿಚಾರಕ್ಕೂ ಆಗಾಗೆ ಜಗಳ ನಡೆಯುತ್ತಲೇ ಇತ್ತು.

ಶನಿವಾರ ಕೂಡ ಜಗಳ ನಡೆದಿದ್ದು, ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿ ಗೀತಾ, ಅತ್ತಿಗೆ ತಲೆ ಮೇಲೆ ಕಲ್ಲು ಎತ್ತುಹಾಕಿ‌ದ್ದಾರೆ. ಈ ವೇಳೆ ಬಲವಾದ ಪೆಟ್ಟುಬಿದ್ದು ರಕ್ತಶ್ರಾವವಾಗಿ ಆಕೆ ಮೃತಪಟ್ಟಿದ್ದಾಳೆ. ಇದರಿಂದ ಹೆದರಿದ ಗೀತಾಳು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಆರ್.ಅಶ್ವಿನಿ, ಎಎಸ್ಪಿ ವಿ‌.ಧನಂಜಯ, ವೃತ್ತ ನಿರೀಕ್ಷಕ ಕ್ಯಾತೇಗೌಡ, ಬಸರಾಳು ಪಿಎಸ್‌ಐ ಜಯಗೌರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...