ಚಿಕ್ಕಬಳ್ಳಾಪುರ: ಮಹಿಳೆಯ ಕಾಟ ತಾಳಲಾರದೇ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ನಿಖಿಲ್ ಕುಮಾರ್ (19) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಹಿಳೆಯ ಕಾಮದಾಟಕ್ಕೆ ಯುವಕ ಬಲಿಯಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.
ನಿಖಿಲ್ 38 ವರ್ಷದ ಮಹಿಳೆ ಶಾರದಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪ ಕೇಳಿಬಂದಿದ್ದು, ಹಲವು ವರ್ಷಗಳ ಹಿಂದೆಯೇ ಗಂಡನಿಂದ ವಿಚ್ಛೇದನ ಪಡೆದಿದ್ದ ಶಾರದಾ ಇಬ್ಬರು ಮಕ್ಕಳೊಂದಿಗೆ ಮೂಡಚಿಂತಹಳ್ಳಿ ಗ್ರಾಮದಲ್ಲಿ ವಾಸವಿದ್ದಾಳೆ.
ಈ ನಡುವೆ ನಿಖಿಲ್ ಪೋಷಕರ ವಿರೋಧದ ನಡುವೆಯೂ ಆತನ ಬಿಡದ ಶಾರದಾ, ಆಗಾಗ್ಗೆ ನಿಖಿಲ್‌ನನ್ನು ಹೊರಗೆ ಕರೆದೊಯ್ಯುತ್ತಿದ್ದಳು ಎಂಬ ಆರೋಪ ಕೇಳಿ ಬಂದಿದೆ.
ಅಲ್ಲೆ ನಿಖಿಲ್ ಜೊತೆಗೆ ಈಕೆ ಆಡಿರುವ ರಾಸಲೀಲೆಯ ಫೋಟೋಗಳು ಲಭ್ಯವಾಗಿದ್ದು, ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಹೇಳಲಾಗುತ್ತಿದೆ.
ಇನ್ನು ಚಿಂತಾಮಣಿಯ ಕಾಚಹಳ್ಳಿ ಕೆರೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಪೋಷಕರು ಶಾರದಾ ವಿರುದ್ಧ ದೂರು ನೀಡಿದ್ದಾರೆ.

ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.
Related









