CrimeNEWSನಮ್ಮರಾಜ್ಯ

ಬಿಜೆಪಿ – ಜೆಡಿಎಸ್​ ಪಾದಯಾತ್ರೆ ವೇಳೆ ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತೆ ಮೃತ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ವಾಲ್ಮೀಕಿ ಮತ್ತು ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ – ಜೆಡಿಎಸ್​ ಬೆಂಗಳೂರಿನಿಂದ ಮೈಸೂರುವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಜರುಗಿದೆ.

ಆಗಸ್ಟ್ 5ರ ಸೋಮವಾರವಾದ ಇಂದು ಮೂರನೇ ದಿನ ದೋಸ್ತಿ ಪಕ್ಷಗಳ ಪಾದಯಾತ್ರೆ ರಾಮನಗರ ಜಿಲ್ಲೆ ಪ್ರವೇಶಿಸಿದ್ದು, ಈ ವೇಳೆ ಬಿಜೆಪಿ​​ ಕಾರ್ಯಕರ್ತೆ ಗೌರಮ್ಮ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪಾದಯಾತ್ರೆ ಚನ್ನಪಟ್ಟಣ ತಲುಪಿದ್ದು, ಈ ವೇಳೆ ಬೆಂಗಳೂರಿನ ಬಸವನಗುಡಿಯ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಚನ್ನಪಟ್ಟಣದಲ್ಲಿ ಪಾದಯಾತ್ರೆ ನಡೆಯುತ್ತಿರುವ ವೇಳೆ ಗೌರಮ್ಮ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಚನ್ನಪಟ್ಟಣದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ, ಅಷ್ಟರಲ್ಲಾಗಲೇ ಗೌರಮ್ಮ ಕೊನೆಯುಸಿರೆಳೆದಿದ್ದಾರೆ.

ಗೌರಮ್ಮ ಅವರ ಮೃತದೇಹ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿದ್ದು, ಜೆಡಿಎಸ್​​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತ ಕಾರ್ಯಕರ್ತೆಯ ಅಂತಿಮ ದರ್ಶನ ಪಡೆದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ