CRIMENEWSಬೆಂಗಳೂರು

ಬಸ್​ ಸ್ಟ್ಯಾಂಡ್​​ನಲ್ಲಿ ನಿಂತಿದ್ದ ಮಹಿಳೆಗೆ BMTC ಎಲೆಕ್ಟ್ರಿಕ್‌ ಬಸ್ ಡಿಕ್ಕಿ- ಚಿಕಿತ್ಸೆ ಫಲಿಸದೆ ಸಾವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಎಲೆಕ್ಟ್ರಿಕ್‌ ಬಸ್‌ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟಿರುವ ಘಟನೆ ಬನಶಂಕರಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬಸ್​​ಗಾಗಿ ಕಾಯುತ್ತಾ ಬಸ್​ ಸ್ಟ್ಯಾಂಡ್​​ನಲ್ಲಿ ನಿಂತಿದ್ದ ಮಹಿಳೆಗೆ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್ (EV Bus) ಡಿಕ್ಕಿ ಹೊಡೆದಿದೆ. ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ (Hospital) ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಮಹಿಳೆ ಕೊನೆಯುಸಿರೆದಿದ್ದಾರೆ ಎಂದು ತಿಳಿದು ಬಂದಿದೆ.

ಮುಬೀನ್ ತಾಜ್ ಎಂಬ ಮಹಿಳೆ ಮೃತಪಟ್ಟವರು. ಬನಶಂಕರಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಗೆ ಇವಿ ಬಸ್​ ಡಿಕ್ಕಿ ಹೊಡೆದಿದ್ದು, ಕಾಲಿನ ಮೇಲೆ ಹರಿದಿತ್ತು. ಇದು ಮಾ.11ರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿತ್ತು.

ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮಹಿಳೆ ಸಾವು: ಅಪಘಾತದ ಬಳಿಕ ಪೊಲೀಸರು ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಮಹಿಳೆ ಕಾಲು ಸಂಪೂರ್ಣವಾಗಿ ನಜ್ಜು-ಗುಜ್ಜಾದ ಪರಿಣಾಮ ಐಸಿಯುನಲ್ಲಿ ಆಕೆಗೆ ಚಿಕಿತ್ಸೆ ಮುಂದುವರೆದಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಬಿಎಂಟಿಸಿ ಚಾಲಕನ ವಿರುದ್ಧ FIR: ಘಟನೆ ಸಂಬಂಧ ಬಿಎಂಟಿಸಿ ಚಾಲಕನ ಮೇಲೆ ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. KA-51, AL 4670 ನಂಬರ್ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಮಹಿಳೆ ಕುಟುಂಬಸ್ಥರು ದೂರು ನೀಡಿದ್ದಾರೆ.

ಹೆಚ್ಚುತ್ತಿವೆ ಅಪಘಾತ ಪ್ರಕರಣಗಳು: ಬಿಎಂಟಿಸಿ ಬಸ್​ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ವಾರದಲ್ಲಿ ಒಂದಲ್ಲ ಒಂದು ಕೇಸ್​ ದಾಖಲಾಗುತ್ತಲೇ ಇದೆ. ಬಿಎಂಟಿಸಿ ಬಸ್​ ಚಾಲಕರ ಸ್ಪೀಡ್​ ಡ್ರೈವ್ ಹಾಗೂ ನಿರ್ಲಕ್ಷ್ಯಕ್ಕೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಅದರಲ್ಲೂ ಎಲೆಕ್ಟ್ರಿಕ್‌ ಬಸ್ ಚಾಲಕರು ಅತೀ ವೇಗವಾಗಿ ಬಸ್‌ ಓಡಿಸುತ್ತಿರುವುದರಿಂದ ಇಂಥ ಘಟನೆಗಳು ನಡೆಯುತ್ತಿವೆ ಆತಂಕ ವ್ಯಕ್ತಪಡಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು?