CrimeNEWSದೇಶ-ವಿದೇಶ

ಹೊತ್ತಿ ಉರಿದ ಬಸ್‌ : 25 ಮಂದಿ ಪ್ರಯಾಣಿಕರು ಸಜೀವ ದಹನ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಚಲಿಸುತ್ತಿದ್ದ ಬಸ್‌ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಪರಿಣಾಮ 25 ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿರುವ ಭೀಕರ ಘಟನೆ ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.

ಯವತ್ಮಾಲ್​ನಿಂದ ಪುಣೆಗೆ ತೆರಳುತ್ತಿದ್ದ ಬಸ್‌ ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾಗಿದೆ. ಈ ಘಟನೆ ತಡರಾತ್ರಿ 2 ಗಂಟೆಗೆ ಬುಲ್ಧಾನಾ ಜಿಲ್ಲೆಯಲ್ಲಿ ನಡೆದಿದ್ದು ಏಕೆ ಈ ರೀತಿ ಬಸ್‌ ಹತ್ತಿಉರಿದಿದೆ ಎಂಬುವುದರ ಬಗ್ಗೆ ತನಿಖೆ ಮಾಡಲಾಗುವುದು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಬುಲ್ಧಾನ ಜಿಲ್ಲೆಯ ಡೆಪ್ಯುಟಿ ಎಸ್​ಪಿ ಬಾಬುರಾವ್ ಮಹಾಮುನಿ ಮಾತನಾಡಿ, 25 ಶವಗಳನ್ನು ಬಸ್​ನಿಂದ ಹೊರತೆಗೆಯಲಾಗಿದೆ. ಬಸ್ಸಿನಲ್ಲಿ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದರು. 6-8 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬಸ್ ಚಾಲಕ ಅವಘಡದಿಂದ ಪಾರಾಗಿ ಸುರಕ್ಷಿತವಾಗಿದ್ದಾರೆ. ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡು ಟೈರ್ ಸ್ಫೋಟಗೊಂಡು ಬಸ್ ಪಲ್ಟಿಯಾಗಿ ಹೊತ್ತಿ ಉರಿದಿದೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸಾನೆ ಹೇಳಿದ್ದಾರೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?