CrimeNEWSದೇಶ-ವಿದೇಶ

ಪ್ರವಾಸದ ವೇಳೆ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪ್ರಾಂಶುಪಾಲ – ಕೇಸ್‌ ದಾಖಲು

ವಿಜಯಪಥ ಸಮಗ್ರ ಸುದ್ದಿ

ಮೀರತ್: ಪ್ರವಾಸದ ವೇಳೆ ವಿದ್ಯಾರ್ಥಿನಿ ಮೇಲೆ ಶಾಲಾ ಪ್ರಾಂಶುಪಾಲನೊಬ್ಬ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ. ಇದರಿಂದ ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ನಾಚಿಕೆಗೇಡಿನ ಘಟನೆ ಮುನ್ನೆಲೆಗೆ ಬಂದಂತಾಗಿದೆ.

ಅತ್ಯಾಚಾರ ಸಂಬಂಧ ಮೀರತ್ ಜಿಲ್ಲೆಯ ಶಾಲೆಯೊಂದರ ಪ್ರಾಂಶುಪಾಲರ ವಿರುದ್ಧ ಅವರದೇ ಶಾಲೆಯಲ್ಲಿ ಓದುತ್ತಿರುವ 11ನೇ ತರಗತಿಯ ವಿದ್ಯಾರ್ಥಿಯೊಬ್ಬರು ದೂರು ದಾಖಲಿಸಿದ್ದಾರೆ.

ಕಳೆದ ನ.23ರಂದು ಶಾಲೆಯ ಒಂಬತ್ತು ವಿದ್ಯಾರ್ಥಿಗಳನ್ನು ವೃಂದಾವನಕ್ಕೆ ಪ್ರವಾಸಕ್ಕೆ ಕರೆದೊಯ್ದಿದ್ದರು. ವಿದ್ಯಾರ್ಥಿನಿಯರಿಗೆ ವಸತಿಗಾಗಿ ಹೋಟೆಲ್‌ನಲ್ಲಿ ಎರಡು ಕೊಠಡಿಗಳನ್ನು ತೆಗೆದುಕೊಂಡಿದ್ದರು. ಒಂದು ಕೊಠಡಿಯಲ್ಲಿ ಎಂಟು ವಿದ್ಯಾರ್ಥಿಗಳು ಉಳಿದುಕೊಂಡಿದ್ದರೆ, ಇನ್ನೊಂದು ಕೊಠಡಿಯಲ್ಲಿ ಪ್ರಾಂಶುಪಾಲರು 11ನೇ ತರಗತಿಯ 17 ವರ್ಷದ ವಿದ್ಯಾರ್ಥಿನಿ ಉಳಿದುಕೊಂಡಿದ್ದರು ಎನ್ನಲಾಗಿದೆ.

ಈ ವೇಳೆ ಪ್ರಾಂಶುಪಾಲರು ವಿದ್ಯಾರ್ಥಿನಿಯ ಆಹಾರದಲ್ಲಿ ಮಾದಕ ವಸ್ತು ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿದಾಗ, ಆಕೆಯನ್ನು ಪರೀಕ್ಷೆಯಲ್ಲಿ ಅನುತ್ತೀರ್ಣ ಮಾಡುವ, ಅಲ್ಲದೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ನ.24ರಂದು ತಮ್ಮ ಮನೆಗೆ ಮರಳಿದರು. ಆರಂಭದಲ್ಲಿ, ಬಾಲಕಿ ಘಟನೆಯ ಬಗ್ಗೆ ಮೌನವಾಗಿದ್ದಳು ಆದರೆ ನಂತರ ಘಟನೆಗಳ ಸಂಪೂರ್ಣ ಮಾಹಿತಿಯನ್ನು ತನ್ನ ಕುಟುಂಬ ಸದಸ್ಯರಿಗೆ ವಿವರಿಸಿದಳು ಎಂದು ಅವರು ಹೇಳಿದರು.

ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಪ್ರಾಂಶುಪಾಲರ ವಿರುದ್ಧ ಶನಿವಾರ ಪ್ರಕರಣ ದಾಖಲಿಸಿಕೊಂಡಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಸದ್ಯ ನಾಪತ್ತೆಯಾಗಿರುವ ಪ್ರಾಂಶುಪಾಲನನ್ನು ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...