CRIMENEWSನಮ್ಮಜಿಲ್ಲೆ

ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌

ವಿಜಯಪಥ ಸಮಗ್ರ ಸುದ್ದಿ

ಆನೇಕಲ್: ತಾನು ಪ್ರೀತಿಸಿದ ಯುವತಿ ಕೈಕೊಟ್ಟಿದ್ದಾಳೆ ಎಂದು ಆರೋಪಿಸಿದ ಪಾಗಲ್ ಪ್ರೇಮಿಯೊಬ್ಬ ಹೈಟೆನ್ಷನ್ ವಿದ್ಯುತ್‌ ಕಂಬ ಹತ್ತಿದ ಘಟನೆ ಆನೇಕಲ್ ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ.

ಸೋಮಶೇಖರ್ ಹೈಟೆನ್ಷನ್ ಕಂಬ ಹತ್ತಿ ಹುಚ್ಚಾಟವಾಡಿದ ಯುವಕ. ಚಿನ್ನಯ್ಯನಪಾಳ್ಯ ನಿವಾಸಿಯಾದ ಸೋಮಶೇಖರ್ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬಳ್ಳನ್ನು ಪ್ರೀತಿಸುತ್ತಿದ್ದ. ಇತ್ತೀಚಿಗೆ ಆ ಯುವತಿ ಮದುವೆಗೆ ನಿರಾಕರಿಸಿದ್ದಾಳೆ.

ಹೀಗಾಗಿ ಲವ್ ಬ್ರೇಕಪ್ ಮಾಡಿಕೊಳ್ಳಲು ಆಕೆ ಮುಂದಾದ ಹಿನ್ನೆಲೆ ಸೋಮಶೇಖರ್ ಮನೆಯ ಶೀಟ್ ಒಡೆದು ದಾಂಧಲೆ ಮಾಡಿದ್ದಾನೆ. ಬಳಿಕ ಮನೆ ಸಮೀಪದ ಹೈಟೆನ್ಷನ್ ಕಂಬ ಹತ್ತಿ ಹುಡುಗಿ ಬರೋವರೆಗೆ ಕೆಳಗೆ ಇಳಿಯುವುದಿಲ್ಲ ಎಂದು ಹಠಹಿಡಿದು ಕುಳಿತ್ತಿದ್ದ.

ಇತ್ತ ವಿಷಯ ತಿಳಿಯುತ್ತಿದ್ದಂತೆ ಆನೇಕಲ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಮನವೊಲಿಸಿದರೂ ಕಿಡಿಗೇಡಿ ಕೆಳಗಿಳಿಯಲಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ತಂಡ ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಗ್ರಾಮಾಸ್ಥರು ಜಮಾಯಿಸಿದ್ದು, ಯುವಕನನ್ನ ಕೆಳಗಿಳಿಸಲು ಶತಪ್ರಯತ್ನ ನಡೆಸುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ