Vijayapatha – ವಿಜಯಪಥ
Friday, November 1, 2024
CrimeNEWSನಮ್ಮಜಿಲ್ಲೆ

ಬೆಂಗಳೂರು ಬಂದ್‌ಗೆ ನಿಯೋಜನೆಗೊಂಡ ಟ್ರಾಫಿಕ್‌ ಪೊಲೀಸ್ ಸಿಬ್ಬಂದಿಗೆ ಕೊಟ್ಟ ಆಹಾರದಲ್ಲಿ ಸತ್ತ ಇಲಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಬಂದ್‌ಗಾಗಿ ನೇಮಿಸಿದ್ದ ಟ್ರಾಫಿಕ್‌ ಪೊಲೀಸ್ ಸಿಬ್ಬಂದಿಗೆ ಕಳಪೆ ಆಹಾರ ಪೂರೈಸಿದ ಘಟನೆ ಬೆಳಕಿಗೆ ಬಂದಿದೆ. ಯಶವಂತಪುರ ಸರ್ಕಲ್‌ನಲ್ಲಿ ಕೆಲಸ ಮಾಡೋ ಪೊಲೀಸರಿಗೆ ಕೊಟ್ಟಿರುವ ಬಿರಿಯಾನಿಯಲ್ಲಿ ಸತ್ತ ಇಲ್ಲಿಯೊಂದು ಪತ್ತೆಯಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇನ್ನು ಅದೃಷ್ಟವಶಾತ್ ಯಾರೂ ಕೂಡ ಆ ಕಳಪೆ ಊಟವನ್ನು ಸೇವಿಸಿಲ್ಲ. ಒಂದು ವೇಳೆ ಇಲಿ ಸತ್ತುಬಿದ್ದಿದ್ದ ಆ ಊಟ ಸೇವಿಸಿದ್ರೆ ಅನಾಹುತ ಆಗೋ ಸಾಧ್ಯತೆ ಇತ್ತು ಎನ್ನಲಾಗಿದೆ. ಹೌದು! ತಮಿಳುನಾಡಿಗೆ ನೀರು ಬಿಡುತ್ತಿರೋದನ್ನು ವಿರೋಧಿಸಿ ರೈತರು, ಕನ್ನಡ ಪರ ಹೋರಾಟಗಾರರು ಇವತ್ತು ಬೆಂಗಳೂರು ಬಂದ್‌ಗೆ ಕರೆ ನೀಡಿದ್ದಾರೆ.

ಬೆಂಗಳೂರು ಬಂದ್ ಹಿನ್ನೆಲೆ ನಗರದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಲ್ಲದೆ ಹೋರಾಟದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ನಗರದಲ್ಲಿ ಟೈಟ್ ಸೆಕ್ಯೂರಿಟಿ ಎಷ್ಟಿದೆ ಅಂದ್ರೆ ಕೆಲವಡೆ ಪ್ರತಿಭಟನಾಕಾರರಿಗಿಂತ ಪೊಲೀಸ್ ಸಿಬ್ಬಂದಿಯ ಸಂಖ್ಯೆಯೇ ಹೆಚ್ಚಾಗಿದೆ. ಇಂಥ ಪೊಲೀಸರಿಗೆ ಆಹಾರ ವ್ಯವಸ್ಥೆ ಮಾಡಲಾಗುತ್ತಿದೆ.

ಇನ್ನು ಕಷ್ಟಪಟ್ಟು ಸಾರ್ವಜನಿಕರ ಭದ್ರತೆಗಾಗಿ ದುಡಿಯುತ್ತಿರುವ ಪೊಲೀಸರಿಗೆ ಕಳಪೆ ಆಹಾರ ಪೂರೈಕೆ ಮಾಡಿರೋದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬೆಂಗಳೂರು ಬಂದ್ ಹಿನ್ನೆಲ ಅಶೋಕ್ ಟಿಫಿನ್ ಸೆಂಟರ್‌ನವರು 180 ಊಟ ಕೊಟ್ಟಿದ್ದಾರೆ. ಅದರಲ್ಲಿ ಇಲಿ ಇರೋದು ಪತ್ತೆಯಾಗಿದೆ. ಊಟದಲ್ಲಿ ಇಲಿ ಕೊಟ್ಟ ಹೊಟೇಲ್ ಮೇಲೆ ಕ್ರಿಮಿನಲ್ ಕೇಸ್ ಹಾಕಲಾಗಿದೆ.

ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಇಲಿ ಇದ್ದ ಊಟ ಕೊಟ್ಟ ವಿಚಾರಕ್ಕೆ ಸಂಚಾರಿ ಕಮಿಷನರ್ ಎಂ.ಎನ್‌. ಅನುಚೇತ್‌ ಗರಂ ಆಗಿದ್ದಾರೆ. ಊಟ ಸಪ್ಲೈ ಮಾಡಿದ ಹೊಟೇಲ್‌ನವರಿಗೆ ಎಂ.ಎನ್ ಅನುಚೇತ್ ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ. ಎರಡು ಹೊತ್ತಿನ ಊಟಕ್ಕೆ ರಾಜ್ಯ ಸರ್ಕಾರ 200 ರೂಪಾಯಿ ಖರ್ಚು ಮಾಡುತ್ತೆ. ಇಷ್ಟಾದರೂ ಒಳ್ಳೆ ಗುಣಮಟ್ಟದ ಊಟ ಯಾಕೆ ಕೊಟ್ಟಿಲ್ಲ ಎಂದು ಅನುಚೇತ್ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಯಶವಂತಪುರ ಸಂಚಾರ ಮತ್ತು ಟ್ರಾಫಿಕ್ ಇನ್ಸ್‌ಪೆಕ್ಟರ್‌ಗಳಿಗೆ ನೊಟೀಸ್ ನೀಡಲಾಗಿದೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...