CrimeNEWSನಮ್ಮಜಿಲ್ಲೆ

ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೃತದೇಹ ಬೆತ್ತಲೆಯಾಗಿ ಪತ್ತೆ: ಹಲವು ಅನುಮಾನಕ್ಕೆ ಎಡೆ

ವಿಜಯಪಥ ಸಮಗ್ರ ಸುದ್ದಿ

ನಾಗಮಂಗಲ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೃತದೇಹ ಬೆತ್ತಲೆಯಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿರುವ ಘಟನೆ ತಾಲೂಕಿನ ತಿರುಮಲಪುರ ಗ್ರಾಮದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಗ್ರಾಮದ ನಿವಾಸಿ ಮುರುಗಮ್ಮ (29) ಎಂಬುವರ ಮೃತದೇಹವೆ ಸಿಕ್ಕಿರುವುದು.

4 ದಿನಗಳ ಹಿಂದೆ ಮನೆಯಿಂದ ಹೊರ ಹೋಗಿದ್ದ ಮಹಿಳೆ ಮತ್ತೆ ವಾಪಸ್ ಮನೆಗೆ ಬಂದಿರಲಿಲ್ಲ. ಆದರೆ ಇಂದು ಶವವಾಗಿ ಪತ್ತೆಯಾಗಿದ್ದು ಅದೂ ಕೂಡ ಬೆತ್ತಲೆಯಾಗಿ ಮೃತದೇಹದ ಕಾಣಿಸಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ದುಷ್ಕರ್ಮಿಗಳು ಪಾಳು ಜಮೀನಿನಲ್ಲಿ ಈಕೆ ಮೇಲೆ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬಂದ ಎಸ್​​ಪಿ ಸೇರಿದಂತೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ