CrimeNEWSದೇಶ-ವಿದೇಶ

ನಾಲ್ಕು ವರ್ಷದ ಮಗುವಿನ ಮೇಲೆ ಪೊಲೀಸ್ ಸಬ್ ಇನ್ಸ್​​ಪೆಕ್ಟರ್‌ನಿಂದಲೇ​​ ಅತ್ಯಾಚಾರ

ವಿಜಯಪಥ ಸಮಗ್ರ ಸುದ್ದಿ

ರಾಜಸ್ತಾನ: ದೌಸಾದಲ್ಲಿ ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದ ಪೊಲೀಸ್ ಸಬ್ ಇನ್ಸ್​​ಪೆಕ್ಟರ್​​ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ದೌಸಾ ಜಿಲ್ಲೆಯ ಲಾಲ್‌ಸಾಟ್‌ನಲ್ಲಿ ಭೂಪೇಂದ್ರ ಸಿಂಗ್ ಎಂಬ ಎಸ್‌ಐ 4 ವರ್ಷದ ಮಗುವನ್ನು ಪುಸಲಾಯಿಸಿ ತನ್ನ ರೂಂಗೆ ಕರೆದುಕೊಂಡು ಹೋಗಿ ಶುಕ್ರವಾರ ಅತ್ಯಾಚಾರ ಎಸಗಿದ್ದ. ಸುದ್ದಿ ತಿಳಿದ ಸ್ಥಳೀಯರು ರಹುವಾಸ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಠಾಣೆಯೊಳಗಿದ್ದ ಭೂಪೇಂದ್ರ ಸಿಂಗ್‌ನ​ನ್ನು ಹೊರಗೆಳೆದುಕೊಂಡು ಬಂದು ಥಳಿಸಿದ್ದಾರೆ.

ಸಾರ್ವಜನಿಕರ ಒತ್ತಾಯಕ್ಕೆ ಮಣಿದ ಹಿರಿಯ ಪೊಲೀಸ್ ಅಧಿಕಾರಿಗಳು ಭೂಪೇಂದ್ರ ಸಿಂಗ್​​ನನ್ನ ವಶಕ್ಕೆ ಪಡೆದುಕೊಂಡರು. ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಸಹ ಸ್ಥಳಕ್ಕೆ ಭೇಟಿ ನೀಡಿದ್ದು, ಉದ್ರಿಕ್ತ ಗುಂಪನ್ನು ಸಮಾಧಾನಪಡಿಸುವ ಪ್ರಯತ್ನ ಮಾಡಿದರು.

ಪೊಲೀಸ್ ಅಧಿಕಾರಿ ದಲಿತ ಜನಾಂಗದ ಮೇಲೆ ಅತ್ಯಾಚಾರ ಎಸಗಿರುವುದರಿಂದ ಜನ ರೊಚ್ಚಿಗೆದ್ದಿದ್ದಾರೆ. ಸಂತ್ರಸ್ತ ಮಗುವಿಗೆ ನ್ಯಾಯ ದೊರಕಿಸಿಕೊಡಬೇಕಾದುದು ನಮ್ಮ ಕರ್ತವ್ಯ. ರಾಜಸ್ತಾನದಲ್ಲಿ ಅಶೋಕ್ ಗೆಹ್ಲೋಟ್​ ಸರ್ಕಾರದಲ್ಲಿ ಅರಾಜಕತೆ ಮನೆ ಮಾಡಿದ್ದು, ಪೊಲೀಸರು ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ ಇದರಿಂದ ಸಾರ್ವಜನಿಕರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್