CrimeNEWSನಮ್ಮಜಿಲ್ಲೆ

ಕುಡಿದ ಮತ್ತಿನಲ್ಲಿ ಮಹಿಳೆ, ಯುವತಿ ಮೇಲೆ ಮೂವರಿದ್ದ ಗ್ಯಾಂಗ್‌ ಹಲ್ಲೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕುಡಿದ ಮತ್ತಿನಲ್ಲಿ ಕ್ಲುಲ್ಲಕ ಕಾರಣಕ್ಕೆ ಮಹಿಳೆ ಮತ್ತು ಯುವತಿಯೊಬ್ಬರು ಪುಂಡರು ಎಳೆದಾಡಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಿನ್ನೆ ಸಂಜೆ ನಡೆದಿದೆ.

ಆವಲಹಳ್ಳಿಯಲ್ಲಿ ಭಾನುವಾರ ಸಂಜೆ 6 ಗಂಟೆಗೆ ಘಟನೆ ನಡೆದಿದ್ದು, ಬಾಲಾಜಿ, ಯೋಗಿ ಎಂಬುವರು ಸೇರಿದಂತೆ ಮೂವರು ಆರೋಪಿಗಳೂ ಈ ಕೃತ್ಯ ಎಸೆಗಿದ್ದಾರೆ.

ಮಹಿಳೆ ಮತ್ತು ಯುವತಿ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಆರೋಪಿಗಳು. ಇದನ್ನು ಕಂಡ ನೆರೆಹೊರೆಯವರು ಸಹಾಯಕ್ಕೆ ಬಂದಿದ್ದರಿಂದ ಯುವತಿ ಮತ್ತು ಮಹಿಳೆ ಕೂದಲೆಳೆ ಅಂತರದಲ್ಲಿ ಆರೋಪಿಗಳ ಕೈಯಿಂದ ಬಚಾವಾಗಿದ್ದಾರೆ.

ರಸ್ತೆಯಲ್ಲಿ ಮಗ ಮಕ್ಕಳೊಂದಿಗೆ ಆಟವಾಡಿದ್ದನು. ಈ ವೇಳೆ ಮನೆ ಬಳಿ ಬಂದ ಗ್ಯಾಂಗ್ ನಿಂದಿಸಿದೆ. ಅದನ್ನು ಪ್ರಶ್ನಿಸಿದ್ದಕ್ಕೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಪುಂಡರು ಯುವತಿಯ ಕೂದಲು ಹಿಡಿದೆಳೆದು ಅಟ್ಟಾಡಿಸುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‍ಗಳಲ್ಲಿ ಸೆರೆಹಿಡಿದಿದ್ದಾರೆ.

ಸದ್ಯ ಆರೋಪಿಗಳಾದ ಬಾಲಾಜಿ ಮತ್ತು ಯೋಗಿ ಇತರರ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.

ದೂರು ದಾಖಲಿಸಿಕೊಂಡಿರುವ ಪೊಲೀಸರು ಐಪಿಸಿ ಸೆಕ್ಷನ್ 506 (ಬೆದರಿಕೆ), 34, 504 (ಶಾಂತಿ ಕದಡುವ ಪ್ರಯತ್ನ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 354 (ಮಹಿಳೆಯ ಮೇಲೆ ದೌರ್ಜನ್ಯ) ಅಡಿ ಕೇಸ್ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ರೈಲ್ವೆ ನೌಕರರಿಗೆ ದಸರಾ ಹಬ್ಬದ ಬಂಪರ್: 78 ದಿನಗಳ ಸಂಬಳಕ್ಕೆ ಸಮನಾದ ಬೋನಸ್ ಘೋಷಣೆ ಅ.6ರಂದು ನಿವೃತ್ತ ನೌಕರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTC ತುಮಕೂರು: ಖಾಸಗಿ ಚಾಲಕರಿಗೆ ಮಣೆ ಹಾಕುವ ಡಿಸಿ, ಡಿಎಂಇ 20-30ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕರ ಕಡೆಗಣನೆ... ಕರ್ನಾಟಕ - ಆಂಧ್ರ ಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಹೆಚ್ಚಿಸಿ: ಎರಡೂ ನಿಗಮಗಳ ಎಂಡಿಗಳಿಗೆ ಪ್ರಯಾಣಿಕರ ಒತ್ತಾಯ ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ KSRTC ನಿವೃತ್ತ ನೌಕರರಿಗೆ ಹೆಚ್ಚಿನ ಪಿಂಚಣಿ ಅನುಷ್ಠಾನ ಶೀಘ್ರ ಜಾರಿಗೊಳಿಸಿ: ಕೇಂದ್ರದ ರಾಜ್ಯ ಕಾರ್ಮಿಕ ಸಚಿವರಿಗೆ ಸಂಸದ... ಬಿಸ್ಮಿಲ್ಲ ನಗರದ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಎಎಪಿ ಆಗ್ರಹ KSRTC ಹೊಳೆನರಸೀಪುರ ಘಟಕದ ನೌಕರರಿಗೆ ಕಿರುಕುಳ ಕೊಡುತ್ತಿರುವ DME- ದೂರು ನೀಡಿ 5 ತಿಂಗಳಾದರೂ ಸ್ಪಂದಿಸದ ಎಂಡಿ! BMTC ಚಾಲನಾ ಸಿಬ್ಬಂದಿಗಳಿಗೆ ಗನ್ ಲೈಸನ್ಸ್ ಪಡೆಯಲು ಅನುಮತಿ ನೀಡಬೇಕು: ಲಿಖಿತವಾಗಿ ಎಂಡಿಗೆ ಮನವಿ ಸಲ್ಲಿಸಿದ ನೌಕರ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತ ಕೆಂಪಣ್ಣ ಆಯೋಗದ ವರದಿ ತಕ್ಷಣ ಬಹಿರಂಗ ಪಡಿಸಿ, ಸದನದಲ್ಲಿ ಮಂಡಿಸಿ: ಎಎಪಿ ಒತ್...