Vijayapatha - ವಿಜಯಪಥ > Blog > NEWS > Crime > ಚುನಾವಣೆ ಕರ್ತವ್ಯಕ್ಕೆ ತೆರಳುತ್ತಿದ್ದ ಸರ್ಕಾರಿ ಶಾಲೆ ಶಿಕ್ಷಕ, ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಮೃತ
ಚುನಾವಣೆ ಕರ್ತವ್ಯಕ್ಕೆ ತೆರಳುತ್ತಿದ್ದ ಸರ್ಕಾರಿ ಶಾಲೆ ಶಿಕ್ಷಕ, ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಮೃತ
Deva06/05/2024
ಬಾಗಲಕೋಟೆ: ಹೃದಯಾಘಾತದಿಂದ ಚುನಾವಣಾ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ಮುಧೋಳ ನಗರದಲ್ಲಿ ಬೆಳಕಿಗೆ ಬಂದಿದೆ. ಮೃತಪಟ್ಟವರನ್ನು ಗೋವಿಂದಪ್ಪ ಸಿದ್ದಾಪುರ ಎಂದು ಗುರುತಿಸಲಾಗಿದೆ.
ಬಸ್ ನಿಲ್ದಾಣದ ಗೇಟ್ ಬಳಿಯೇ ಗೋವಿಂದಪ್ಪ ಸಿದ್ದಾಪುರ ಹೃದಯಾಘಾತದಿಂದ ಕುಸಿದು ಬಿದ್ದು ಅಸುನೀಗಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ಹತ್ತಲು ಬಂದಿದ್ದರು. ಆದರೆ ಬಸ್ ಹತ್ತುವ ಮುನ್ನವೇ ಗೋವಿಂದಪ್ಪ ಸಿದ್ದಾಪುರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಮೃತಪಟ್ಟ ಗೋವಿಂದಪ್ಪ ಸಿದ್ದಾಪುರ ಜಮಖಂಡಿ ತಾಲೂಕಿನ ಬಿದರಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿದ್ದರು. ತಾಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
Related
Deva
Leave a reply