ಚಿಕ್ಕಮಗಳೂರು: ಪದವಿ ವಿದ್ಯಾರ್ಥಿನಿಯೊಬ್ಬಳು ಪಾಲಕರು ಬುದ್ಧಿವಾದ ಹೇಳಿದ್ದಕ್ಕೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ.
ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿಎಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ಎಂಬಾಕೆಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವಳು.
ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಪಾಲಕರು ಹಲವು ವಿಚಾರಗಳಲ್ಲಿ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದ ಸುರಕ್ಷಾ ಮನೆಯಲ್ಲಿ ವಿಷ ಸೇವಿಸಿದ್ದಳು. ಅದನ್ನು ಕಂಡ ಕೂಡಲೇ ಆಕೆಯನ್ನು ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಘಿ ಶಿವಮೊಗ್ಗ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾಳೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗಣೇಶ ಹಬ್ಬಕ್ಕೆಂದು ಮನೆಗೆ ಬಂದಿದ್ದ ಸುರಕ್ಷಾಳಿಗೆ ಪಾಲಕರು ಹಲವು ವಿಷಯದಲ್ಲಿ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ಈ ರೀತಿ ಮಾಡಿಕೊಂಡಿರುವುದಕ್ಕೆ ಕುಂಟುಬದವರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.
ಶೃಂಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸುರಕ್ಷಾ ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿದ್ದು, ಕಾಲೇಜಿಗೆ ತೆರಳುತ್ತಿದ್ದಳು. ಆತ್ಮಹತ್ಯೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.