CrimeNEWSನಮ್ಮಜಿಲ್ಲೆ

ಗಂಡ ನನ್ನ ಜತೆ ಜೀವನ‌ ಮಾಡುತ್ತಿಲ್ಲವೆಂದರೆ ಬದುಕ್ಕಿದ್ದು ಸತ್ತಂತೆಯೇ ಎಂದು ಆತ್ಮಹತ್ಯೆಗೆ ಶರಣಾದ ಗೃಹಿಣಿ

ವಿಜಯಪಥ ಸಮಗ್ರ ಸುದ್ದಿ

ವಿಜಯನಗರ: ಸಾವಿಗೂ ಮುನ್ನ ಪತ್ರ ಬರೆದಿಟ್ಟಿರುವ ಗೃಹಿಣಿಯೊಬ್ಬರು ನನ್ನ ಗಂಡ ನನ್ನ ಜತೆ ಜೀವನ ಹಂಚಿಕೊಳ್ಳಲು ಮುಂದಾಗದಿರುವುದಿರುವುದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಹೂವಿನ ಹಡಗಲಿ ನಿವಾಸಿ 33 ವರ್ಷದ ರೂಪಾ ಅಲಿಯಾಸ್ ಬಸಮ್ಮ ಆತ್ಮಹತ್ಯೆಗೆ ಶರಣಾದ ಗೃಹಿಣಿ.

ಆತ್ಮಹತ್ಯೆಗೂ ಮುನ್ನ ಬರೆದಿದ್ದ ಪತ್ರದಲ್ಲೇನಿದೆ ?: ನನ್ನ ಗಂಡ ನನ್ನ ಜತೆ ಜೀವನ ನಡೆಸಲು ನಿರಾಕರಿಸಿದ ಕಾರಣ ಮಾನಸಿಕವಾಗಿ ಬಹಳ ನೊಂದು ಸಾವು ಬಿಟ್ಟರೆ ಬೇರೆ ಯಾವ ದಾರಿಯೂ ಇಲ್ಲ ಎಂಬ ನಿರ್ಧಾರ ಮಾಡಿದ್ದೇನೆ.

ನನ್ನ ಗಂಡ ನನ್ನ ಜತೆ ಜೀವನ‌ ಮಾಡುತ್ತಿಲ್ಲ. ನಾನು ನನ್ನ ಗಂಡನನ್ನು ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದೆ. ನಾನು ಎಷ್ಟೇ ಪರಿಪರಿಯಾಗಿ ಕೇಳಿಕೊಂಡರು, ನನ್ನ ಜತೆ ಜೀವನ ಮಾಡಲಿಲ್ಲ. ಹೀಗಾಗಿ ನಾನು ಅನಿವಾರ್ಯವಾಗಿ ಈ ನಿರ್ಧಾರಕ್ಕೆ ಬಂದೆ.

ಆತ್ಮಹತ್ಯೆ ಮಾಹಾ ಪಾಪ ಎಂಬುವುದು ನನಗೆ ಗೊತ್ತಿದೆ. ನನಗೆ ಬದುಕಲು ನನ್ನ ಗಂಡನೇ ಅವಕಾಶ ಮಾಡಿಕೊಡುತ್ತಿಲ್ಲ. ನಾನು ಬದುಕುವದಾದ್ರೆ ಅದು ನನ್ನ ಗಂಡನ ಜೊತೆ ಮತ್ತು ಅವನ ಮನೆಯಲ್ಲಿ. ಆದರೆ ನನಗೆ ಆತ  ಜೊತೆಯಲ್ಲಿ ಬದುಕಲು ಅವಕಾಶ ಮಾಡಿಕೊಡುತ್ತಿಲ್ಲ. ಹಾಗಾಗಿ ಬೇರೆ ದಾರಿ ಇಲ್ಲದೇ ಸಾಯುವ ನಿರ್ಧಾರ ಮಾಡಿ ಎಲ್ಲರನ್ನು ಬಿಟ್ಟು ಹೋಗುತ್ತಿದ್ದೇನೆ. ನನ್ನನ್ನು ಕ್ಷಮಿಸಿ ಬಿಡಿ ಸಾಧ್ಯವಾದರೆ.

ಧನ್ಯವಾದಗಳು
ಇಂತಿ ನಿಮ್ಮ ರೂಪ (ಬಸಮ್ಮ)

ಮಾನಸಿಕ ಕಿರುಕುಳ;  ಮಗಳಿಗೆ ಆಕೆಯ ಗಂಡ ಅರ್ಜುನ್ ಪರಶೆಟ್ಟಿ ಮಾನಸಿಕ ಕಿರುಕುಳ ನೀಡುತ್ತಿದ್ದನು. ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ ಎಂದು ಆತ್ಮಹತ್ಯೆ ಮಾಡಿಕೊಂಡ ಬಸಮ್ಮ ಅವರ ಪಾಲಕರು ಆರೋಪಿಸಿದ್ದು, ಆತ್ಮಹತ್ಯೆ ಸಂಬಂಧ ಬಸಮ್ಮ ಅವರ ತಾಯಿ ಹೂವಿನ ಹಡಗಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈ ದೂರಿನ ಅನ್ವಯ ಅರ್ಜುನ್ ಶೆಟ್ಟಿ ಸೇರಿದಂತೆ ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿಕೊಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ