CrimeNEWSನಮ್ಮಜಿಲ್ಲೆ

ಉದ್ಯೋಗದ ಆಸೆ- ಆನ್‍ಲೈನ್‍ನಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾದ ಉಪನ್ಯಾಸಕಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬೀದರ್: ಉದ್ಯೋಗಕ್ಕಾಗಿ ಆನ್‍ಲೈನ್‍ನಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾದ ಉಪನ್ಯಾಸಕಿ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.

ಖಾಸಗಿ ಕಾಲೇಜಿನ ಉಪನ್ಯಾಸಕಿ ಆರತಿ ಕನಾಟೆ (28) ಆತ್ಮಹತ್ಯೆ ಮಾಡಿಕೊಂಡರು. ಆನ್‍ಲೈನ್‍ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಹಣದ ವ್ಯವಹಾರ ನಡೆಸಿ ವಂಚನೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆನ್‍ಲೈನ್‍ನಲ್ಲಿ ಮನೆಯಲ್ಲೇ ಕುಳಿತು ಉದ್ಯಮ ಮಾಡಲು ಹಣ ಹೂಡಿಕೆ ಮಾಡಿ ಎಂದ ವ್ಯಕ್ತಿಯನ್ನು ನಂಬಿದ ಉಪನ್ಯಾಸಕಿ ಬರೋಬ್ಬರಿ 2.50 ಲಕ್ಷ ರೂ.ವರೆಗೆ ಹಣ ಕಳುಹಿಸಿದ್ದಾರೆ. ಬಳಿಕ ಇನ್ನೂ 82 ಸಾವಿರ ರೂಪಾಯಿ ಕಳಿಸಿದರೆ ಉದ್ಯೋಗದ ಜೊತೆಗೆ ಹೂಡಿಕೆ ಮಾಡಿದ ಎಲ್ಲ ಹಣವನ್ನು ವಾಪಸ್ ಕೊಡುತ್ತೇನೆ ಎಂದು ವಂಚಕ ತಿಳಿಸಿದ್ದಾನೆ.

ಇದರಿಂದ ಭಯಗೊಂಡ ಮತ್ತು ಮನೆಯವರ ಗಮನಕ್ಕೆ ತಾರದೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಭೀತಿಯಿಂದ ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಹಣ ಹೂಡಿಕೆ ಮಾಡಿದ್ದ ಏಜೆನ್ಸಿ ಬಗ್ಗೆ ಡೆತ್‍ನೋಟ್‍ನಲ್ಲಿ ಉಲ್ಲೇಖ ಮಾಡಿದ್ದಾರೆ ಉಪನ್ಯಾಸಕಿ.

ಉಪನ್ಯಾಸಕಿ ಆರತಿ ಕನಾಟೆ ಬಸವಕಲ್ಯಾಣ ನಗರದ ಖಾಸಗಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಘಟನೆ ಸಂಬಂಧ ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ