Search By Date & Category

NEWSನಮ್ಮಜಿಲ್ಲೆ

ಕೊರಟಗೆರೆಯಲ್ಲಿ ಹಾಲು ಕರೆಯುತ್ತಿದ್ದ ಬಾಲಕರ ಮೇಲೆ ಚಿರತೆ ದಾಳಿ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಜಿಲ್ಲೆಯಲ್ಲೂ ಚಿರತೆ ಉಪಟಳ ಹೆಚ್ಚಾಗಿದ್ದು, ಜನರು ಭೀತಿಗೊಂಡಿದ್ದಾರೆ. ಇಂದು ಮುಂಜಾನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ಮಾಡಿದೆ.

ಬೆಳಗ್ಗೆ ಹಸುವಿನ ಹಾಲು ಕರೆಯಲೆಂದು ಕೊಟ್ಟಿಗೆಗೆ ಹೋದ ಸಂದರ್ಭದಲ್ಲಿ ಚಿರತೆ ದಾಳಿ ಮಾಡಿದೆ. ಕೂಡಲೇ ಬಾಲಕರನ್ನು ತುಮಕೂರಿನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಒದಗಿಸಲಾಗಿದೆ.

ಕೆಲ ತಿಂಗಳ ಹಿಂದೆ ಇದೇ ತಾಲೂಕಿನ ವಜ್ಜನಕುರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋರಗಾನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಕರುವೊಂದು ಮೃತಪಟ್ಟಿವೆ.

Leave a Reply

error: Content is protected !!