NEWSನಮ್ಮಜಿಲ್ಲೆನಮ್ಮರಾಜ್ಯ

ಡಿ.2ರಂದು KSRTC ಎಂಡಿ ಅಧ್ಯಕ್ಷತೆಯಲ್ಲಿ ಸಾರಿಗೆ ನೌಕರರ ಸಮಾನ ಮನಸ್ಕರ ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ಸಮಸ್ಯೆ ಪರಿಹಾರ ಸಂಬಂಧ ಚರ್ಚಿಸಲು ಎಂಡಿ ಅಧ್ಯಕ್ಷತೆಯಲ್ಲಿ KSRTC ಕಾರ್ಮಿಕ ಸಂಘಟನೆಯ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆಯೊಂದಿಗೆ ಡಿ.2ರಂದು ನೌಕರರ ಕುಂದುಕೊರತೆ ಸಭೆ ನಡೆಯಲಿದೆ.

ಈ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿಗಳ ಸಭೆಯನ್ನು ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಮಾಡಲಾಗುತ್ತಿದೆ ಎಂದು ನಿಗಮದ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಅಂದು ಮಧ್ಯಾಹ್ನ 3 ಗಂಟೆಗೆ ನಿಗಮದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಸಭೆ ಆಯೋಜಿಸಿದ್ದು ಪ್ರತಿ ಸಂಘಟನೆಯಿಂದ ಇಬ್ಬರಂತೆ ಹಾಜರಾಬೇಕು ಎಂದು ತಿಳಿಸಿದ್ದಾರೆ.

ಡಿಸೆಂಬರ್‌ 2ರಂದು ಸಭೆಯಲ್ಲಿ ಪ್ರಮುಖವಾಗಿ ನೌಕರರ ಪರ ಸಂಘಟನೆಗಳ ಪದಾಧಿಕಾರಿಗಳಿಂದ ವೇತನ, ನೌಕರರ ಸಮಸ್ಯೆ ಕುರಿತು ಸಲಹೆ ಸೂಚನೆಗಳನ್ನು ಪಡೆಯುವುದು, ಜತೆಗೆ ಮುಷ್ಕರದ ವೇಳೆ ಆಗಿರುವ ಪೊಲೀಸ್‌ ಪ್ರಕರಣಗಳು ಸೇರಿ ನೌಕರರು ಅನುಭವಿಸುತ್ತಿರುವ ಮಾನಸಿಕ ಕಿರಿಕಿರಿ ತಪ್ಪಿಸಲು ಯಾವ ರೀತಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...