Vijayapatha - ವಿಜಯಪಥ > Blog > NEWS > Crime > ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ, ಯುವತಿ ಸ್ಥಳದಲ್ಲೇ ಮೃತ
ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ, ಯುವತಿ ಸ್ಥಳದಲ್ಲೇ ಮೃತ
Deva16/01/2024
ಚಿತ್ರದುರ್ಗ: ಕಾಲೇಜಿಗೆ ತರೆಳಲು ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ವಿಜಾಪುರ ಗೊಲ್ಲರಹಟ್ಟಿ ಗ್ರಾಮದ ನಿವಾಸಿ 19 ವರ್ಷದ ಸುಚಿತ್ರ ಸ್ಥಳದಲ್ಲೇ ಸಾವನ್ನಪ್ಪಿದ್ದ ವಿದ್ಯಾರ್ಥಿನಿ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯಾರ್ಥಿನಿ ರಾಷ್ಟ್ರೀಯ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಹಾರಿ ಬಿದ್ದಿದ್ದಾರೆ.
ಚಿತ್ರದುರ್ಗ ತಾಲೂಕಿನ ವಿಜಾಪುರ ಗೊಲ್ಲರಹಟ್ಟಿ ಬಳಿ ಈ ದುರ್ಘಟನೆ ನಡೆದಿದೆ. ಗೊಲ್ಲರಹಟ್ಟಿ ಬಳಿ ಕಾಲೇಜಿಗೆ ಹೋಗಲು 3 ಜನ ವಿದ್ಯಾರ್ಥಿನಿಯರು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಲಾರಿ ಭಯಾನಕವಾಗಿ ಡಿಕ್ಕಿ ಹೊಡೆದಿದೆ.
ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಭೀಕರ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಭರಮಸಾಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Related
Deva
Leave a reply