CRIMENEWSದೇಶ-ವಿದೇಶ

ಸರ್ಕಾರಿ ಬಸ್‌ಗೆ ಜಲ್ಲಿ ತುಂಬಿದ ಲಾರಿ ಡಿಕ್ಕಿ: 20 ಮಂದಿ ಸಾವು, ಹಲವರಿಗೆ ಗಂಭೀರಗಾಯ

ವಿಜಯಪಥ ಸಮಗ್ರ ಸುದ್ದಿ

ಹೈದರಾಬಾದ್: ಬೈಕ್​ ಓವರ್​ಟೇಕ್ ಮಾಡುವಾಗ ಭರದಲ್ಲಿ ಜಿಲ್ಲಿ ತುಂಬಿದ ಲಾರಿಯೊಂದು ಅತೀವಬೇಗವಾಗಿ ಬಂದು ಸರ್ಕಾರಿ ಬಸ್​ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ 3 ತಿಂಗಳ ಮಗು, ಇಬ್ಬರೂ ಚಾಲಕರು ಸೇರಿದಂತೆ 20 ಮಂದಿ ಮೃತಪಟ್ಟಿರುವ ಘಟನೆ ಮಿರಿಜಾಗುಡಾ ಪ್ರದೇಶದ ಹತ್ತಿರ ನಡೆದಿದೆ.

ಇನ್ನು ಈ ಅಪಘಾಯದಲ್ಲಿ ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದು ತೆಲಂಗಾಣದ ರಂಗರೆಡ್ಡಿ ಜಿಲ್ಲೆಯ ಚೆವೆಲ್ಲ ನಗರದ ಮಿರಿಜಾಗುಡಾ ಪ್ರದೇಶದ ಸಮೀಪದಲ್ಲಿ ಸಂಭವಿಸಿದೆ.

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಟಿಎಸ್‌ಆರ್‌ಟಿಸಿ) ಬಸ್​ ಹೈದರಾಬಾದ್​ಗೆ ತೆರಳುತ್ತಿತ್ತು. ಮಿರಿಜಾಗುಡಾ ಪ್ರದೇಶದ ಸಮೀಪದ ಇದೇ ಸಮಯದಲ್ಲಿ ಎದುರಿನಿಂದ ಬರುತ್ತಿದ್ದ ಜೆಲ್ಲಿ ತುಂಬಿದ ಲಾರಿ ಅತಿ ವೇಗದಲ್ಲೇ ಬೈಕ್​ ಅನ್ನು ಓವರ್​ಟೇಕ್ ಮಾಡುತ್ತಿತ್ತು. ಈ ವೇಳೆ ಲಾರಿ ಚಾಲಕ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬಸ್​ ಅನ್ನು ಗಮನಿಸದೆ ತಿರುಗಿಸಿದ್ದರಿಂದ ವೇಗದಲ್ಲಿದ್ದ ಲಾರಿ, ಬಸ್​ಗೆ ಭಯಂಕರವಾಗಿ ಡಿಕ್ಕಿ ಹೊಡೆದಿದೆ.

ಪರಿಣಾಮ ಬಸ್​ನಲ್ಲಿದ್ದ 70 ಪ್ರಯಾಣಿಕರಲ್ಲಿ 20 ಮಂದಿ ಅಸುನೀಗಿದ್ದಾರೆ. ಇದರಲ್ಲಿ ಮೂರು ತಿಂಗಳ ಹಸುಗೂಸು ಕೂಡ ಸೇರಿದೆ. ಮೃತರಲ್ಲಿ ಲಾರಿ ಚಾಲಕ ಹಾಗೂ ಬಸ್‌ ಚಾಲಕ​ ಸೇರಿ 10 ಮಂದಿ ಪುರುಷರು, 9 ಮಹಿಳೆಯರು, ಒಂದು ಮಗು ಕೊನೆಯುಸಿರೆಳೆದಿದೆ.

70 ಪ್ರಯಾಣಿಕರಿದ್ದ ಬಸ್ ತಾಂಡೂರುನಿಂದ ಹೈದರಾಬಾದ್​ಗೆ ತೆರಳುತ್ತಿತ್ತು. ಕಚೇರಿ ಸೇರಿದಂತೆ ಇತರ ಡ್ಯೂಟಿಗೆ ಹೋಗುತ್ತಿದ್ದವರು ಹಾಗೂ ವಿದ್ಯಾರ್ಥಿಗಳು ಇದ್ದರು. ನಿನ್ನೆ ಭಾನುವಾರ ಆಗಿದ್ದರಿಂದ ಮನೆಗೆ ಬಂದ ವಿದ್ಯಾರ್ಥಿಗಳು ಇಂದು ಶಾಲೆ, ಕಾಲೇಜುಗಳಿಗೆ ಹೊರಟಿದ್ದರು.

ಹೈದರಾಬಾದ್​ಗೆ ಕೆಲಸಕ್ಕೆ ಹೋಗುತ್ತಿದ್ದ ಹಲವು ಮಂದಿ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಹತ್ತಾರೂ ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಹೈದರಾಬಾದ್​ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿಲಾಗುತ್ತಿದೆ.

ಇನ್ನು ಚೇವೆಲ್ಲಾ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು. ಕುಟುಂಬಗಳಿಗೆ ಶವಗಳ ಹಸ್ತಾಂತರ ಮಾಡಲಾಗಿದೆ. ಈ ನಡುವೆ 5 ಮಂದಿ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ತೆಲಂಗಾಣ ಬಸ್ ಅಪಘಾತಕ್ಕೆ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿಯ ಅತಿವೇಗವೇ ದುರಂತಕ್ಕೆ ಕಾರಣ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ.

2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಸಂತ್ರಸ್ತ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ದುರಂತದ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಭಾರಿ ನೊಂದುಕೊಂಡಿದ್ದು, ಮೃತ ಪ್ರಯಾಣಿಕರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ, ಗಾಯಾಳುಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಪವಿತ್ರ ರಂಜಾನ್ ಹಬ್ಬದ ಸಂದೇಶ ಮನುಕುಲಕ್ಕೆ‌ ಮಾರ್ಗದರ್ಶನ: ಸಿಎಂ ರಾಜ್ಯ ಉಗ್ರಾಣ ನಿಗಮದ ಎಂಡಿ ಆತ್ಮಹತ್ಯೆ ಪ್ರಕರಣ: ಸಾರಿಗೆ ಸಚಿವ ರಾಜೀನಾಮೆ! KKRTC: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ- 8ಮಂದಿಗೆ ಗಾಯ BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್... KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು ಬೆಂಗಳೂರಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರಿ ಬಸ್‌ ಬ್ರೇಕ್ ಫೇಲಾಗಿ ಬೈಕ್, ಪಿಕಪ್ ವ್ಯಾನ್‌ಗೆ ಡಿಕ್ಕಿ: ಗರ್ಭಿಣಿ, ಮಗು ಸೇರಿ ಎಂಟು ಮಂದಿ ಸಾವು BMTC: ಕುಡಿದು ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜತೆ ಚಾಲಕನ ರಂಪಾಟ ಆರೋಪ ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂಒ ನೇರ ಹಸ್ತಕ್ಷೇಪಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ ಮಾಜಿ ಪ್ರಧಾನಿ ಎಚ್‌ಡಿಡಿ ಸಹೋದರಿ ಜವರಮ್ಮ ನಿಧನ