NEWS

ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡಲು ಸಾಗಾಟ ಮಾಡುತ್ತಿದ್ದ ಅಕ್ಕಿ ತುಂಬಿದ ಲಾರಿಯೇ ಕಳವು

ವಿಜಯಪಥ ಸಮಗ್ರ ಸುದ್ದಿ

ಯಾದಗಿರಿ: ಬಡವರ ಹೊಟ್ಟೆ ತುಂಬಿಸುವ ಸಲುವಾಗಿ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡಲು ಸಾಗಾಟ ಮಾಡುತ್ತಿದ್ದ ಅಕ್ಕಿ ತುಂಬಿದ ಲಾರಿಯನ್ನೇ ಕಳ್ಳತನ ಮಾಡಿರುವ ಘಟನೆ ಯಾದರಿಗಿಯಲ್ಲಿ ನಡೆದಿದೆ.

ಬಡವರ ಹಸಿವು ನೀಗಿಸುವ ಸಲುವಾಗಿ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು ಪ್ರತಿ ಕಾರ್ಡುದಾರ ಕುಟುಂಬಕ್ಕೆ ಐದೈದು ಕೆಜಿ ಅಕ್ಕಿಯನ್ನು ನೀಡುತ್ತಿದೆ. ಆಯಾ ನ್ಯಾಯಬೆಲೆ ಅಂಗಡಿಗಳಿಗೆ ಅಧಿಕೃತ ಪರವಾನಗಿ ಪಡೆದಿರುವ ವಾಹನಗಳ ಮೂಲಕ ಅಕ್ಕಿಯನ್ನು ಸಾಗಾಟ ಮಾಡಲಾಗುತ್ತದೆ.

ಆದರೆ ನಿಯಮಗಳನ್ನು ಮೀರಿರುವ ಯಾದಗಿರಿಯ ಆಹಾರ ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರನ ನಿರ್ಲಕ್ಷ್ಯದಿಂದ 420 ಮೂಟೆಯ ಬರೋಬ್ಬರಿ 20 ಟನ್ ಪಡಿತರ ಅಕ್ಕಿ ಇದ್ದ ಲಾರಿ ಕಳ್ಳತನ ಆಗಿದೆ.

ಜಿಲ್ಲೆಯ ಶಹಾಪುರ ತಾಲೂಕಿನ ವಿವಿಧ ಗ್ರಾಮಗಳ ಪಡಿತರ ಕೇಂದ್ರಗಳಿಗೆ ವಿತರಿಸಲು ಲಾರಿಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ತುಂಬಿಕೊಂಡು ಹೋಗಲಾಗಿತ್ತು.

ಅಕ್ಕಿ ತುಂಬಿದ್ದ ಲಾರಿಯನ್ನು ಶಹಾಪುರದ ನಗರದ ಎಪಿಎಂಸಿ ಬಳಿ ನಿಲ್ಲಿಸಿದ್ದಾಗ ಲಾರಿ ಸಮೇತ ಅಕ್ಕಿಯನ್ನು ಕಳವು ಮಾಡಲಾಗಿದೆ. ಎಪಿಎಂಸಿಯಲ್ಲಿ ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವ 4 ಲಾರಿಗಳನ್ನು ನಿಲ್ಲಿಸಲಾಗಿತ್ತು. ಅದರಲ್ಲಿ ಒಂದು ಲಾರಿಯಲ್ಲಿ 420 ಮೂಟೆಯ 20 ಟನ್ ಅಕ್ಕಿ ಇತ್ತು.

ಚಾಲಕ ಕೀಯನ್ನು ಲಾರಿಯಲ್ಲೇ ಬಿಟ್ಟಿದ್ದ. ಮಾತ್ರವಲ್ಲದೇ ತಾನು ರಾತ್ರಿ ಲಾರಿಯಲ್ಲಿ ಮಲಗುವುದನ್ನು ಬಿಟ್ಟು ತನ್ನ ಸ್ವಗ್ರಾಮ ಸುರಪುರಕ್ಕೆ ಹೋಗಿದ್ದ. ಊರಿನಿಂದ ಬೆಳಗ್ಗೆ ವಾಪಸ್ ಬಂದು ನೋಡಿದರೆ ನಿಲ್ಲಿಸಿದ್ದ ಜಾಗದಲ್ಲಿ ಲಾರಿಯೇ ಇರಲಿಲ್ಲ.

ಎಪಿಎಂಸಿ ಸೇರಿ ಇಡೀ ಪಟ್ಟಣದಲ್ಲಿ ಲಾರಿ ಹುಡುಕಿದರೂ ಎಲ್ಲಿಯೂ ಸಿಗಲಿಲ್ಲ. ಇದರಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯ ಇರುವುದರಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಘಟನೆ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಆದರೆ ಪಡಿತರ ಅಕ್ಕಿ ಸಾಗಾಟ ಮಾಡುವ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಇರಬೇಕಿದ್ದರೂ ಇಲ್ಲಿ ಅದು ಸಂಪೂರ್ಣ ಉಲ್ಲಂಘನೆಯಾಗಿದೆ. ಜಿಪಿಎಸ್ ಇಲ್ಲದ ವಾಹನದಲ್ಲಿ ಅಕ್ಕಿ ಸಾಗಾಟಕ್ಕೆ ಅಧಿಕಾರಿಗಳು ಹೇಗೆ ಅವಕಾಶ ಮಾಡಿಕೊಟ್ಟರು ಎನ್ನುವ ಸಂಶಯ ವ್ಯಕ್ತವಾಗಿದೆ.

ಇಲ್ಲಿ ಗುತ್ತಿಗೆದಾರನ ತಪ್ಪು ಎಷ್ಟಿದೆಯೋ ಅಷ್ಟೇ ಅಧಿಕಾರಿಗಳ ನಿರ್ಲಕ್ಷ್ಯವೂ ಇದೆ. ಹೀಗಾಗಿ 2 ದಿನಗಳಿಂದ ವಾಹನ ಹುಡುಕಾಟ ಮಾಡುತ್ತಿದ್ದರೂ ಪೊಲೀಸರಿಗೆ ಯಾವುದೇ ಸುಳಿವು ಸಿಗುತ್ತಿಲ್ಲ.

ಸಿಪಿಐ ಚೆನ್ನಯ್ಯ ಹಿರೇಮಠ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಿ ಲಾರಿಯನ್ನು ಹುಡುಕಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೋಲಿಸ್ ತನಿಖೆಯೂ ಚುರುಕುಗೊಂಡಿದೆ. ಮಾತ್ರವಲ್ಲದೇ ನಗರದ ಎಲ್ಲ ಸಿಸಿ ಕ್ಯಾಮೆರಾಗಳ ಪರಿಶೀಲನೆ ಮಾಡಲಾಗುತ್ತಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...