CRIMENEWSನಮ್ಮಜಿಲ್ಲೆ

ಬ್ರೇಕ್​​ ಫೇಲಾಗಿ ಅಡ್ಡಾದಿಡ್ಡಿ ನುಗ್ಗಿದ ಲಾರಿ ಸಿಕ್ಕಿ ಸಿಕ್ಕ ವಾಹನಗಳಿಗೆ ಡಿಕ್ಕಿ

ವಿಜಯಪಥ ಸಮಗ್ರ ಸುದ್ದಿ
  • ಎರಡು ಕಾರುಗಳು, 3 ಬೈಕ್​ಗಳು ಜಖಂ

ದೇವನಹಳ್ಳಿ: ಬ್ರೇಕ್​​ ಫೇಲ್ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ನುಗ್ಗಿದ ಲಾರಿಯೊಂದು ಸಿಕ್ಕಿ ಸಿಕ್ಕ ವಾಹನಗಳಿಗೆ ಗುದ್ದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿ ನಡೆದಿದೆ.

ಇನ್ನು ಎದುರು ಬರುತ್ತಿದ್ದ ಕಾರುಗಳು, ದ್ವಿಚಕ್ರ ವಾಹನಗಳು ಸೇರಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಬಳಿಕ ಲಾರಿ ನಿಂತಿದ್ದು, ಘಟನೆಯ ದೃಶ್ಯ ಕಾರೊಂದರ ಡ್ಯಾಶ್​​ ಕ್ಯಾಮರಾದಲ್ಲಿ ಸೆರೆಯಾಗಿದೆ.

ಲಾರಿ‌ ನುಗ್ಗಿದ ರಭಸಕ್ಕೆ ಎರಡು ಕಾರುಗಳು, 3 ಬೈಕ್​ಗಳು ಜಖಂ ಆಗಿದ್ದು, ವಾಹನಗಳಲ್ಲಿದ್ದ ಎಲ್ಲರೂ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಏರ್​ಪೋರ್ಟ್​ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಲೋಡ್ ತುಂಬಿಕೊಂಡು ಬರುತ್ತಿದ್ದಾಗ ಲಾರಿಯ ಬ್ರೇಕ್ ಫೇಲ್​ ಆಗಿ ಈ ಘಟನೆ ನಡೆದು ಎಂದು ಹೇಳಲಾಗುತ್ತಿದೆ.

ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಅಪಘಾತ ಸಂಬಂಧ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ