CrimeNEWSನಮ್ಮಜಿಲ್ಲೆ

ಗಂಡು ಮಗುವನ್ನು ಹುಟ್ಟಿಸಲು ಶಕ್ತಿಯಿಲ್ಲದ ದುರುಳನೊಬ್ಬ ಗಂಡು ಮಗು ಹೆರಲಿಲ್ಲ ಎಂದು ಕೋರ್ಟ್‌ ಆವರಣದಲ್ಲೇ ಪತ್ನಿಯ ಹತ್ಯೆಗೈದ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾಸನ: ಗಂಡು ಮಗುವನ್ನು ಹುಟ್ಟಿಸಲು ಶಕ್ತಿಯಿಲ್ಲ ದುರುಳನೊಬ್ಬ ತನ್ನ ಪತ್ನಿ ಗಂಡು ಮಗು ಹೆರಲಿಲ್ಲ ಎಂಬ ಕಾರಣಕ್ಕೆ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿವ ಘಟನೆ ಶನಿವಾರ ಹೊಳೆನರಸೀಪುರ ಕೋರ್ಟ್ ಆವರಣದಲ್ಲೇ ನಡೆದಿದೆ.

ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್‌ ಹತ್ಯ ಮಾಡಿದ ದುಷ್ಟ, ಚೈತ್ರಾ ಹತ್ಯೆಯಾದವರು.

ತಾಲೂಕಿನ, ತಟ್ಟೆಕೆರೆ ಗ್ರಾಮದ ಶಿವಕುಮಾರ್ ಹಾಗೂ ಚನ್ನರಾಯಪಟ್ಟಣ ತಾಲೂಕಿನ, ನುಗ್ಗೇಹಳ್ಳಿ ಹೋಬಳಿ ಅವೇರಹಳ್ಳಿ ಗ್ರಾಮದ ಚೈತ್ರಾ ಕಳೆದ 7 ವರ್ಷದ ಹಿಂದೆ ಮದುವೆಯಾಗಿದ್ದರು.

ದಂಪತಿಗೆ ಎರಡು ಹೆಣ್ಣುಮಕ್ಕಳಿದ್ದು, ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಇಲ್ಲದ ಕಾರಣ ಮೂರು ವರ್ಷಗಳ ಹಿಂದೆ ಶಿವಕುಮಾರ್ ವಿರುದ್ಧ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಳು.

ತನ್ನ ವಿರುದ್ಧವೇ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಕ್ಕೆ ಶಿವಕುಮಾರ್ ಪತ್ನಿಯ ವಿರುದ್ಧ ಕೋಪಗೊಂಡಿದ್ದ. ಇದನ್ನು ಲೆಕ್ಕಿಸದೆ ಚೈತ್ರಾ ನ್ಯಾಯಾಲಯಕ್ಕೆ ಹೋಗಿದ್ದಾಳೆ. ಎರಡೂ ಮಕ್ಕಳು ಹೆಣ್ಣು ಎಂಬ ಕಾರಣಕ್ಕೆ ಪತ್ನಿಗೆ ಚಿತ್ರಹಿಂಸೆ ಕೊಡುತ್ತಿದ್ದ. ಈ ಹಿನ್ನೆಲೆಯಲ್ಲಿ ಬೇಸತ್ತಿದ್ದ ಚೈತ್ರಾ ಗಂಡನಿಂದ ಜೀವನಾಂಶ ಕೋರಿ ಕೋರ್ಟ್‌ ಅರ್ಜಿ ಸಲ್ಲಿಸಿದ್ದರು.

ಈ ವಿಚಾರವಾಗಿ ಶನಿವಾರ ಹೊಳೆನರಸೀಪುರ ಕೋರ್ಟ್‌ಗೆ ಚೈತ್ರಾ ಆಗಮಿಸಿದ್ದರು. ಮಧ್ಯಾಹ್ನ 12.30ರ ಸುಮಾರಿನಲ್ಲಿ ಕೋರ್ಟ್ ಆವರಣದ ಶೌಚಗೃಹಕ್ಕೆ ಚೈತ್ರಾ ತೆರಳಿದ್ದಾಗ ಹೊಂಚುಹಾಕಿ ಕಾಯುತ್ತಿದ್ದ ಶಿವಕುಮಾರ್, ಆಕೆಯ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ್ದ. ಆದರೆ ಅಲ್ಲಿದ್ದವರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ