ಕೋಲಾರ: ಸಾರಿಗೆ ನೌಕರರು ಇಂದು ಕೋಲಾರದಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶಕ್ಕೂ ಮುನ್ನ ಕೋಲಾರ ಜಿಲ್ಲಾಧಿಕಾರಿಗಳಿಗೆ ತಮ್ಮ ಬೇಡಿಕೆ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸುವಂತೆ ಮನವಿ ಪತ್ರ ಸಲ್ಲಿಸಲು ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದರು.
ಬಳಿಕ ಸಮಾವೇಶದಲ್ಲಿ ಭಾಗವಹಿಸುವ ಮೂಲಕ ಸರ್ಕಾರಕ್ಕೆ ತಮ್ಮ ದಶಕಗಳ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಲಿದ್ದಾರೆ. ಹೀಗಾಗಿ ಪಾದಯಾತ್ರೆ ಮೂಲಕ ಮೊದಲು ಒಗ್ಗಟ್ಟು ಪ್ರದರ್ಶಿಸಿದ್ದಾರೆ ಸಾರಿಗೆ ನೌಕರರು.