ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸುವ ಸಂಬಂಧ ಇದೇ ನ.8ರಂದು ಬೆಳಗ್ಗೆ 11.30 ಗಂಟೆಗೆ ಕೇಂದ್ರ ಕಚೇರಿಯಲ್ಲಿ ಸಭೆಯನ್ನು ನಿಗದಿಪಡಿಸಿದೆ.
ನಿಗಮದಲ್ಲಿ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಮಾತ್ರ ಚರ್ಚಿಸಲು ನಿಗಮದ ಎಲ್ಲ ನೋಂದಾಯಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಭೆ ನಿಗದಿಪಡಿಸಲಾಗಿದೆ.
ಈ ಸಭೆಗೆ ಪ್ರತಿ ಕಾರ್ಮಿಕ ಸಂಘಟನೆಯಿಂದ ಇಬ್ಬರು ಪದಾಧಿಕಾರಿಗಳು ಮಾತ್ರ ಹಾಜರಾಗಬೇಕು ಎಂದು ನಿಗಮದ ನಿರ್ದೇಶಕರು (ಸಿ&ಜಾ) ಸೂಚನೆ ನೀಡಿದ್ದಾರೆ.
ಇನ್ನು ಸಾರಿಗೆ ಮತ್ತು ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ಕಳೆದ ಅಕ್ಟೋಬರ್ 9ರಂದು ನಿಗಮದ ನೋಂದಾಯಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸಲು ಇದು ಮೊದಲ ಹೆಜ್ಜೆಯಾಗಿದೆ.
ಹೀಗಾಗಿ ಸಭೆಯಲ್ಲಿ ಭಾಗವಹಿಸುವ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ನಿಗಮದ ಅಧಿಕಾರಿಗಳು/ನೌಕರರ ಹಿತದೃಷ್ಟಿಯಿಂದ ಅವರ ಜೇಬಿಗೆ ಕತ್ತರಿ ಬೀಳದ ರೀತಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಸಲಹೆ ಸೂಚನೆಗಳನ್ನು ಕೊಡಬೇಕು. ಅದನ್ನು ಬಿಟ್ಟು ಮತ್ತೆತ್ತಿದರೆ ನೌಕರರಿಂದ ಕೊಡುಗೆ (contribution) ಪಡೆದು ಜಾರಿ ಮಾಡಿ ಎಂಬುದನ್ನು ಬಿಡಬೇಕು ಎಂದು ಸಮಸ್ತ ನೌಕರರು ಮನವಿ ಮಾಡಿದ್ದಾರೆ.
ಇನ್ನು ಸಭೆ ಸಂಬಂಧ ನಿನ್ನೆ ಅಂದರೆ ನ.6ರಂದು ಪದಾಧಿಕಾರಿಗಳು ಕ.ರಾ.ರ.ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಪದಾಧಿಕಾರಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಒಕ್ಕೂಟ.
ಅಧ್ಯಕ್ಷರು, ಕರ್ನಾಟಕ ರಸ್ತೆ ಸಾರಿಗೆ ಮಜ್ಯೂರ್ ಸಂಘ ಒಕ್ಕೂಟ, ಅಧ್ಯಕ್ಷರು, KSRTC & BMTC ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್‌ಗೆ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ಕೊಡುವಂತೆ ಕೋರಿದ್ದಾರೆ.