Please assign a menu to the primary menu location under menu

CrimeNEWSಬೆಂಗಳೂರು

ತನ್ನಿಬ್ಬರು ಮಕ್ಕಳ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ ತಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಾಯಿಯೊಬ್ಬಳು ಮಕ್ಕಳೊಂದಿಗೆ ಯುಗಾದಿ ಹಬ್ಬವನ್ನು ಮಾಡಿ ಖುಷಿಪುಡುವುದರ ಬದಲು, ತನ್ನಿಬ್ಬರು ಮುದ್ದಾದ ಮಕ್ಕಳನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿಕೊಲೆ ಮಾಡಿರುವ ಘಟನೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

9 ವರ್ಷದ ಮಗಳು ಲಕ್ಷ್ಮೀ, 7 ವರ್ಷದ ಮಗ ಗೌತಮ್​​ನನ್ನು ಮಂಗಳವಾರ ರಾತ್ರಿ ಬರ್ಬರವಾಗಿ ಕೊಲೆ ಮಾಡಿದ್ದಾಳೆ. ಪ್ರಾಥಮಿಕ ಮಾಹಿತಿ ಪ್ರಕಾರ, ತಲೆ ದಿಂಬಿನಿಂದ ಉಸಿರುಗಟ್ಟಿಸಿ ಮಕ್ಕಳನ್ನು ಕೊಂದಿದ್ದಾಳೆ. ಸದ್ಯ ಕೊಲೆ ಆರೋಪಿ ತಾಯಿ ಗಂಗಾದೇವಿಯನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮಕ್ಕಳನ್ನು ಹತ್ಯೆ ಮಾಡಿದ ತಾಯಿ ಬಳಿಕ ಪೊಲೀಸ್‌ ಕಂಟ್ರೋಲ್ ರೂಂಗೆ ಕರೆ ಮಾಡಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಗಂಗಾದೇವಿಯನ್ನು ವಶಕ್ಕೆ ಪಡೆದಿದ್ದಾರೆ.

ಪತಿಯನ್ನು ಜೈಲಿಗೆ ಕಳುಹಿಸಿದ್ದಳು: ಗಂಗಾದೇವಿ ಕಳೆದ ಮಾರ್ಚ್‌ನಲ್ಲಿ ಗಂಡನ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಳು. ಗಂಡ ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗುತ್ತಿದ್ದಾನೆಂದು ದೂರು ನೀಡಿದ್ದಳು. ಗಂಗಾದೇವಿ ಕೊಟ್ಟ ದೂರಿನ ಆಧಾರದ ಮೇಲೆ ಗಂಡನನ್ನು ಬಂಧಿಸಿ ಜಾಲಹಳ್ಳಿ ಪೊಲೀಸರು ಜೈಲಿಗೆ ಕಳಿಸಿದ್ದರು. ಅದಾದ ಬಳಿಕ ಈಗ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದಾಳೆ.

ಕೆಲಸ ಇಲ್ಲದೇ ಮಕ್ಕಳಿಬ್ಬರನ್ನು ಸಾಕುವುದಕ್ಕೆ ಕಷ್ಟವಾಗುತ್ತಿತ್ತು. ಆ ಕಾರಣಕ್ಕಾಗಿ ಇಬ್ಬರು ಮಕ್ಕಳನ್ನು ರಾತ್ರಿ 9.30ರ ಸಮಯದಲ್ಲಿ ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ಹೇಳಿದ್ದಾಳೆ ಎಂದು ತಿಳಿದುಬಂದಿದೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...