ನಾಗರ ಹಾವಿನಿಂದ ಕ್ಷಣಾರ್ಧದಲ್ಲಿ ಮಗನನ್ನು ರಕ್ಷಿಸಿರುವ ತಾಯಿ- ಭಯಾನಕ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್
ಮಂಡ್ಯ: ತಾಯಿ ಮಗು ಇಬ್ಬರು ಮನೆಯಿಂದ ಹೊರಬರುತ್ತಿದ್ದಂತೆ ಮೆಟ್ಟಿಲ ಕೆಳಗೆ ಹರಿದು ಹೋಗುತ್ತಿದ್ದ ನಾಗರಹಾವನ್ನು ನೋಡದೆ ಮುಗು ಇಳಿಯುತ್ತದೆ. ಕೂಡಲೇ ಹಾವು ಹಿಂದೆ ಸರಿದು ಹೆಡೆ ಎತ್ತಿ ನಿಲ್ಲುತ್ತದೆ. ಕ್ಷಣಾರ್ಧದಲ್ಲೇ ಆ ಮಗುವನ್ನು ತಾಯಿ ಹಾವಿನಿಂದ ರಕ್ಷಿಸಿದ ದೃಶ್ಯ ಮೈ ರೋಮಗಳು ಸೆಟೆದು ನಿಲ್ಲುವಂತೆ ಮಾಡುತ್ತವೆ.
ಹೌದು! ಮಹಿಳೆಯೊಬ್ಬರು ನಾಗರ ಹಾವಿನಿಂದ ಕ್ಷಣಾರ್ಧದಲ್ಲಿ ಮಗನನ್ನು ರಕ್ಷಿಸಿರುವ ಭಯಾನಕ ವಿಡಿಯೋವೊಂದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮಂಡ್ಯ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮನೆಯ ಬಳಿ ಇದ್ದ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ವಿಡಿಯೋದಲ್ಲಿ ಬಾಲಕ ಶಾಲೆಗೆ ಹೊರಟ್ಟಿದ್ದ ವೇಳೆ ಮನೆಯ ಹೊರಗೆ ಮೆಟ್ಟಿಲ ಕೆಳಗೆ ನಾಗರಹಾವು ನುಸುಳಿತ್ತು. ಹಾವು ಇರುವುದನ್ನು ಕಾಣದೇ ಮೆಟ್ಟಿಲಿನಿಂದ ಕೆಳಗೆ ಇಳಿಯುತ್ತಿದ್ದಂತೆಯೇ ಹಾವು ಹಿಂದಕ್ಕೆ ಸರಿದಿದೆ.
ಅದನ್ನು ಕಂಡ ಕೂಡಲೇ ಬಾಲಕನ ತಾಯಿ ಮೆಟ್ಟಿಲಿನಿಂದ ಇಳಿದು ಹೆಡೆ ಎತ್ತಿದ ನಾಗರಹಾವು ಬಾಲಕನನ್ನು ಕಚ್ಚಲು ಪ್ರಯತ್ನಿಸಿದಾಗ ಮಗನನ್ನು ದೂರಕ್ಕೆ ಎಳೆದೊಯ್ದು ಬಿಗಿದಪ್ಪಿಕೊಂಡು ರಕ್ಷಿಸಿದ್ದಾರೆ.
ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಒಂದು ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಈ ವಿಡಿಯೋ ಜೊತೆಗೆ ಕರ್ನಾಟಕದ ಮಂಡ್ಯದಲ್ಲಿ ತಾಯಿಯೊಬ್ಬಳು ತನ್ನ ಪುಟ್ಟ ಮಗನನ್ನು ದೊಡ್ಡ ನಾಗರ ಹಾವಿನಿಂದ ರಕ್ಷಿಸಿದ್ದಾರೆ ಎಂದು ಕ್ಯಾಪ್ಷನ್‍ನಲ್ಲಿ ಬರೆಯಲಾಗಿದೆ. ಒಟ್ಟಾರೆ ಪ್ರಾಣ ಒತ್ತೆ ಇಟ್ಟು ಮಗನನ್ನು ಹಾವಿನಿಂದ ಪಾರು ಮಾಡಿದ ತಾಯಿಯ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
Her presence of mind saved the kid..
Mother ❤️
But be safe all, this is an eye opener to all pic.twitter.com/tPm6WbGc8g— Anu Satheesh 🇮🇳 (@AnuSatheesh5) August 12, 2022
Related
You Might Also Like
KSRTC: ಅಧಿಕಾರಿಗಳು ಬೀದಿಗಿಳಿಯದ ಹೊರತು ನಾವು ಮುಷ್ಕರ ಬೆಂಬಲಿಸಲ್ಲ- ಸಮಸ್ತ ಚಾಲನಾ ಸಿಬ್ಬಂದಿಗಳು
ಬೆಂಗಳೂರು: ರಾಜ್ಯ ಸಾರಿಗೆಯ ನಾಲ್ಕೂ ನಿಗಮಗಳ ಎಲ್ಲ ಅಧಿಕಾರಿ ವರ್ಗ, ಆಡಳಿತ ವರ್ಗ, ಭದ್ರತಾ ಸಿಬ್ಬಂದಿಗಳು ಎಲ್ಲರೂ ತಮ್ಮ ತಮ್ಮ ಕರ್ತವ್ಯ ತೊರೆದು ಬಂದು ಎಲ್ಲಿತನಕ ಮುಷ್ಕರಕ್ಕೆ...
KSRTC: ಸಾರಿಗೆ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡೇಮಾಡುತ್ತೇವೆ- ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ...
ಪಂಚಭೂತಗಳಲ್ಲಿ ಲೀನವಾದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್
ನ್ಯೂಡೆಲ್ಲಿ: ಭಾರತದ ಮಾಜಿ ಪ್ರಧಾನಿಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ಬೋಧ್ ಘಾಟ್ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮಧ್ಯಾಹ್ನ...
ಕಟಾವುಮಾಡಿ ಕಣದಲ್ಲೇ ಬಿಟ್ಟಿದ್ದ 60 ಕ್ವಿಂಟಲ್ ಭತ್ತ ತಿಂದು ನಾಶ ಮಾಡಿದ ಆನೆಗಳು: ತಲೆಮೇಲೆ ಕೈಹೊತ್ತು ಕುಳಿತ ರೈತರು
ಹಾಸನ: ಬೆಳೆದು ನಿಂತಿದ್ದ ಭತ್ತವನ್ನು ಕಟಾವು ಮಾಡಿ ಗದ್ದೆಯಲ್ಲೇ ಚೀಲಕ್ಕೆ ತುಂಬಿಟ್ಟಿದ್ದ ಸುಮಾರು 60 ಕ್ವಿಂಟಲ್ ಭತ್ತವನ್ನು ಕಾಡಾನೆಗಳ ಹಿಂಡು ತಿಂದುಹಾಕಿ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟಮಾಡಿರುವ...
ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿದ ಪಾಪಿಗಳು
ಢಾಕಾ: ಮಧ್ಯಂತರ ಸರ್ಕಾರ ಬಾಂಗ್ಲಾದೇಶದಲ್ಲಿ ಬಂದ ಬಳಿಕ ಅಲ್ಪಸಂಖ್ಯಾತರ ಮೇಲಿನ ದಾಳಿ ಹೆಚ್ಚಾಗುತ್ತಲೇ ಇದೆ. ಹಿಂದೂ ದೇಗುಲಗಳ ಮೇಲೆ ದಾಳಿ ಮಾಡಿದ ಬಳಿಕ ಈಗ ಕ್ರಿಸ್ಮಸ್ ಸಂಭ್ರಮಾಚರಣೆ...
ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ: 5 ಸಾವಿರ ಪ್ರವಾಸಿಗರ ರಕ್ಷಿಸಿದ ಪೊಲೀಸರು
ಡೆಹ್ರಾಡೂನ್: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆ ಶುಕ್ರವಾರ ಹಿಮಾಚಲ ಪ್ರದೇಶದ ಕುಲುವಿನ ಸ್ಕೀ ರೆಸಾರ್ಟ್ ಸೊಲಾಂಗ್ ನಾಲಾದಲ್ಲಿ ಸಿಲುಕಿದ್ದ ಸುಮಾರು 5,000 ಪ್ರವಾಸಿಗರನ್ನು ಪೊಲೀಸರು ರಕ್ಷಿಸಿದ್ದಾರೆ....
ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ತುಂಬಿದ ಲಾರಿ ಡಿಕ್ಕಿ: ಹೊತ್ತಿ ಉರಿದ ಕ್ಯಾಂಟರ್- ಚಾಲಕರಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ: ಸಿಎನ್ಜಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರದ ಹುನೇಗಲ್ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ...
KSRTC: ನಾಲ್ಕೂ ನಿಗಮಗಳ ಸಾರಿಗೆ ನೌಕರರು ಜ.1ರಿಂದ 6 ತಿಂಗಳುಗಳ ಕಾಲ ಮುಷ್ಕರ ಮಾಡುವಂತಿಲ್ಲ- ಸರ್ಕಾರ ಆದೇಶ
ಬೆಂಗಳೂರು: 2024ರ ಜನವರಿ ಒಂದರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿ 1ರಿಂದ ಹೆಚ್ಚಳವಾಗಿರುವ ಶೇ.15ರಷ್ಟು ವೇತನದ 38 ತಿಂಗಳುಗಳ ಹಿಂಬಾಕಿ ಕೊಡುವಂತೆ...
ಟೀ ಕುಡಿದು ಹೋಗುವಿರಂತೆ ಮನೆಗೆ ಬನ್ನಿ ಎಂದು ಕರೆದ ಸುಂದರಿಯ ಮಾತು ನಂಬಿ ಹನಿ ಟ್ರ್ಯಾಪ್‌ಗೆ ಬಿದ್ದ ಕಂಟ್ರ್ಯಾಕ್ಟರ್
ಬೆಂಗಳೂರು: ಕಂಟ್ರ್ಯಾಕ್ಟರ್ಗೆ ಬಲೆ ಬೀಸಿ ಹನಿ ಟ್ರ್ಯಾಪ್ ಮಾಡಿರೋ ಸುಂದರಿಯ ಗ್ಯಾಂಗ್ ಪ್ರಕರಣ ಬೆಳಕಿಗೆ ಬಂದಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕಂಟ್ರ್ಯಾಕ್ಟರ್ ರಂಗನಾಥ್ ಎಂಬುವರು ಯುವತಿ ನಯನಾ...
4 ವರ್ಷಕ್ಕೊಮ್ಮೆ ಚೌಕಾಸಿ ನಡೆಸುವ ಬದಲು 7ನೇ ವೇತನ ಆಯೋಗ ಜಾರಿಮಾಡಿ: ನೌಕರರ ಸೇನೆ ಆಗ್ರಹ
ಬೆಂಗಳೂರು: ಸಾರಿಗೆ ನೌಕರರ ವೇತನ ಹೆಚ್ಚಳಕ್ಕಾಗಿ ನಾಲ್ಕು ವರ್ಷಕ್ಕೊಮ್ಮೆ ಸರ್ಕಾರದೊಂದಿಗೆ ಚೌಕಾಸಿ ನಡೆಸುವ ಬದಲು ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ...
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ
ನ್ಯೂಡೆಲ್ಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇಂದು ರಾತ್ರಿ ನಿಧನಹೊಂದಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರನ್ನು ವಯೋಸಹಜ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು....
2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್
ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇಗೆ ಕ್ರಮ ಬೆಂ.ಗ್ರಾ.: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ...