CrimeNEWSನಮ್ಮಜಿಲ್ಲೆ

ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ನರ್ಸಿಂಗ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ನೇಕಾರ ಕಾಲೋನಿಯ ನಿವಾಸಿ ಕೀರ್ತನಾ ಮಧುಕರ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬಿಎಲ್‍ಡಿಇ ನರ್ಸಿಂಗ್ ಕಾಲೇಜ್‍ನಲ್ಲಿ ಎರಡನೇ ವರ್ಷದ ನರ್ಸಿಂಗ್ ನಲ್ಲಿ ಓದುತ್ತಿದ್ದಳು.

ಪರೀಕ್ಷೆಯ ಫಲಿತಾಂಶ ಬಂದಾಗ ಆಕೆ ನಿರೀಕ್ಷೆಯಷ್ಟು ಅಂಕಗಳು ಬಂದಿರಲಿಲ್ಲ. ಈ ವಿಚಾರದಿಂದ ನೊಂದುಕೊಂಡ ಕೀರ್ತನಾ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
20 ದಿನದೊಳಗೆ ರೈತರಿಗೆ ಬರ ಪರಿಹಾರ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ KSRTC: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ -6ಮಂದಿಗೆ ಗಾಯ KSRTC ಗುಂಡ್ಲುಪೇಟೆ ಘಟಕ: ನೌಕರರಿಗೆ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿರುವ ಡಿಎಂ, ಎಟಿಎಸ್‌ - DC ಮೌನ NWKRTC: ಬಸ್‌ನಿಂದ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಮಹಿಳೆ ಧಾರುಣಸಾವು ಬಸ್‌ - ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ : ನಾಲ್ವರು ಮೃತ, ಹಲವರಿಗೆ ಗಾಯ KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!?