ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ ವೇತನ ಪರಿಷ್ಕರಣೆ ಬಾಕಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 5 ರಿಂದ ಸಾರಿಗೆ ನೌಕರರು ಕೆಎಸ್ಆರ್ಟಿಸಿ ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುತ್ತಿದ್ದು ಈ ಹಿನ್ನೆಲೆಯಲ್ಲಿ ಇಂದು ಒಂದು ದಿನ ಸಾಮೂಹಿಕ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.
ಇಂದು ಬೆಳಗ್ಗೆಯಿಂದ ಫ್ರೀಡಂ ಪಾರ್ಕ್‌ನಲ್ಲಿ ಸಾಮೂಹಿಕ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದು, 2020ರ ಜನವರಿ 1 ರಂದು ಅಂದಿನ ಬಿಜೆಪಿ ಸರ್ಕಾರ ಏಕಪಕ್ಷೀಯವಾಗಿ ಶೇ15ರಷ್ಟು ವೇತನ ಪರಿಷ್ಕರಣೆ ಮಾಡಿತ್ತು. ಆದರೆ, ತದನಂತರ ಬಂದ ಕಾಂಗ್ರೆಸ್ ಸರ್ಕಾರ ವೇತನ ಪರಿಷ್ಕರಣೆಯನ್ನು ಜಾರಿಗೆ ತಂದರು, 38 ತಿಂಗಳ ಹಿಂಬಾಕಿ ಸುಮಾರು 1800 ಕೋಟಿ ರೂ.ಗಳನ್ನು ಇದುವರೆಗೂ ನೌಕರರಿಗೆ ನೀಡಿಲ್ಲ.
ಸರ್ಕಾರದ ಈ ಧೋರಣೆಯನ್ನು ಖಂಡಿಸಿ ಹಲವು ಬಾರಿ ಮನವಿ ನೀಡಿದರೂ ಇಲ್ಲ, ಸಲ್ಲದ ಸಬೂಬು ಹೇಳಿ ಮುಂದೂಡುತ್ತಲೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಜುಲೈ 4 ರಂದು ನಡೆದ ತ್ರಿಪಕ್ಷಿಯ ಸಭೆಯಲ್ಲಿ ಹಿಂಬಾಕಿ ನೀಡಲು ಸಾಧ್ಯವಿಲ್ಲ ಎಂಬ ಮಾತು ಹೇಳಿದೆ. ಇದನ್ನು ಜಂಟಿ ಕ್ರಿಯಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಅಲ್ಲದೆ ಸಾರಿಗೆ ನೌಕರರು ಕೊರೊನಾ ಸಂದರ್ಭದಲ್ಲಿಯೂ ಹಗಲು, ಇರುಳು ಎನ್ನದೆ, ತಮ್ಮ ಜೀವದ ಹಂಗು ತೊರೆದು ಡ್ಯೂಟಿ ಮಾಡಿದ್ದಾರೆ. ಇದರಿಂದ ನಿಗಮಕ್ಕೂ ಒಳ್ಳೆಯ ಹೆಸರು ಬಂದಿದೆ. ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆದರೆ ಸಾರಿಗೆ ನೌಕರರನ್ನು ಮಾತ್ರ ಮಲತಾಯಿ ಮಕ್ಕಳಂತೆ ನೋಡುತ್ತಿದ್ದಾರೆ.
ತ್ರಿಪಕ್ಷಿಯ ಒಡಂಬಡಿಕೆಯಂತೆ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನೌಕರರ ವೇತನ ಪರಿಷ್ಕರಣೆಯಾಗಬೇಕು. ಇದರ ಪ್ರಕಾರ 01-01-2024ಕ್ಕೆ ವೇತನ ಪರಿಷ್ಕರಣೆಯಾಗಬೇಕಿತ್ತು. ಕಳೆದ 18 ತಿಂಗಳಿನಿಂದ ಈಗ, ಆಗ, ಸಂಕ್ರಾತಿ ಕಳೆದು, ಯುಗಾದಿ ಕಳೆದು ಎಂದು ಮುಂದೂಡುತ್ತಲೇ ಬಂದಿದ್ದಾರೆ. ಸರ್ಕಾರದ ಈ ಅಸಹಕಾರದ ನಡುವೆಯೂ ಸಾರಿಗೆ ನೌಕರರು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಎಲ್ಲ ಕೊರತೆಗಳ ನಡುವೆಯೂ ಯಶಸ್ವಿಗೊಳಿಸಿದ್ದಾರೆ.
ಈ ಶಕ್ತಿ ಯೋಜನೆಯ ಯಶಸ್ಸಿಗೆ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುವ ಸರ್ಕಾರ, ನೌಕರರ ಮನವಿಗಳನ್ನು ಕಡೆಗಣಿಸಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಎರಡು ಸಭೆಗಳಲ್ಲಿಯೂ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದ ಸಿದ್ದರಾಮಯ್ಯ ಅವರು, 2025ರ ಜುಲೈ 04 ರಂದು ನಡೆದ ಸಭೆಯಲ್ಲಿ ಮಾತ್ರ ಸಾರಿಗೆ ನೌಕರರ ಮನವಿಯನ್ನು ಸರಾಸಗಟಾಗಿ ತಳ್ಳಿಹಾಕಿದೆ.
ಈ ಹಿನ್ನೆಲಯಲ್ಲಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಸಾರಿಗೆ ಮುಷ್ಕರಕ್ಕೆ ಕರೆ ನೀಡಿ ಸರ್ಕಾರಕ್ಕೆ ಆಗಸ್ಟ್ 04 ರವರೆಗೆ ಅವಕಾಶ ನೀಡಿದೆ. ಅಷ್ಟರಲ್ಲಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಆ.5 ರಿಂದ ಎಲ್ಲ ನೌಕರರು ತಮ್ಮ ಕೆಲಸ ಕೈಬಿಟ್ಟು ಮುಷ್ಕರ ನಡೆಸಲಿದ್ದಾರೆ.

ಸರ್ಕಾರ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಸಲು ಮಾತುಕತೆ ನಡೆಸುವ ಬದಲಿಗೆ ಸಾರಿಗೆ ನೌಕರರ ಮೇಲೆ ‘ಎಸ್ಮಾ’ ಕಾಯ್ದೆ ಜಾರಿ ಮಾಡುವುದಾಗಿ ಹೇಳಿದೆ. ಸಾರಿಗೆ ನೌಕರರು ಸರ್ಕಾರದ ಈ ವಿಳಂಬ ನೀತಿ ಮತ್ತು ಸಾರಿಗೆ ನೌಕರರ ವಿರೋಧಿ ನೀತಿಗಳಿಗೆ ಬೇಸತ್ತಿದ್ದಾರೆ ಹಾಗಾಗಿ ‘ಎಸ್ಮಾ’ ಜಾರಿಗೂ ಹೆದರದೆ ಕಾರ್ಮಿಕರು ಮುಷ್ಕರ ನಡೆಸಲಿದ್ದಾರೆ.
ಈ ಸಾರಿಗೆ ಮುಷ್ಕರ ನಡೆದು ಸಾರ್ವಜನಿಕರಿಗೆ ಮತ್ತು ಕಾರ್ಮಿಕರಿಗೆ ಆಗುವ ತೊಂದರೆಗಳಿಗೆ ರಾಜ್ಯ ಸರ್ಕಾರವೇ ಮುಂದೆ ಹೊಣೆಯಾಗಲಿದೆ ಎಂದು ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಇಡೀ ವಿಶ್ವದಲ್ಲಿ ಒಂದು ಸಾರಿಗೆ ಸಂಸ್ಥೆ ತನ್ನ ಸಮರ್ಪಕ ಸೇವೆಗಾಗಿ 600ಕ್ಕೂ ಪ್ರಶಸ್ತಿಗಳನ್ನು ಪಡೆದಿದ್ದರೆ ಅದು ಕೆ.ಎಸ್.ಆರ್.ಟಿ.ಸಿ ಮಾತ್ರ. ಹೀಗಿದ್ದು, ಇಷ್ಟೆಲ್ಲಾ ಪ್ರಶಸ್ತಿಗಳು ಬರಲು ಕಾರಣರಾಗಿದ್ದ ಬಸ್ ಡ್ರೆವರ್‌ಗಳು, ಕಂಡಕ್ಟರ್‌ಗಳು, ಮೇಕಾನಿಕ್ ಹಾಗೂ ಇತರೆ ಸಿಬ್ಬಂದಿಯವರ ಶ್ರಮದ ಫಲವಾಗಿ ಪ್ರಶಸ್ತಿ ಬಂದಿದೆ. ಆದರೆ ಸಾರಿಗೆ ನೌಕರರಿಗೆ ಮಾತ್ರ ಇದರಲ್ಲಿ ಪಾಲಿಲ್ಲ.
ಆಳುವ ಎಲ್ಲ ಸರ್ಕಾರಗಳು ಕಾರ್ಮಿಕರ ವಿಷಯದಲ್ಲಿ ಒಂದೇ ಧೋರಣೆ ತಾಳಿವೆ. ವಿರೋಧ ಪಕ್ಷದಲ್ಲಿದ್ದಾಗ ಸಾರಿಗೆ ನೌಕರರ ಪರವಾಗಿ ದೊಡ್ಡದಾಗಿ ಮಾತನಾಡುವ ನಾಯಕರು, ತಮಗೆ ಅಧಿಕಾರ ಸಿಕ್ಕಾಗ, ಜಾಣ ಕಿವುಡು, ಮರೆವು ಪ್ರದರ್ಶನ ಮಾಡುತ್ತಾರೆ. ಸರ್ಕಾರದ ಈ ನಿರ್ಧಾರವನ್ನು ಖಂಡಿಸುತ್ತೇವೆ. ಆ.05 ಅನಿರ್ದಿಷ್ಟಾವಧಿ ಮುಷ್ಕರದ ಪೂರ್ವಭಾವಿಯಾಗಿ ಇಂದು ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ನಡೆಸುವ ಮುಖಾಂತರ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಸ್ತೆ ಸಾರಿಗೆ ನೌಕರರ ಮುಷ್ಕರ ಅತ್ಯಂತ ನ್ಯಾಯಯುತವಾಗಿದ್ದು, ಈ ಮುಷ್ಕರಕ್ಕೆ ಜಂಟಿ ಕ್ರಿಯಾ ಸಮಿತಿಯ ಎಲ್ಲ ಸಂಘಟನೆಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ. ಸಾರಿಗೆ ನೌಕರರು ತಮ್ಮ ನ್ಯಾಯಯುತ ಬೇಡಿಕೆಗಳು ಈಡೇರುವವರೆಗೆ ಯಾವುದೇ ಒತ್ತಡಗಳಿಗೆ ಮಣಿಯದೆ ಮುಷ್ಕರದಲ್ಲಿ ಭಾಗವಹಿಸಿ ಮುಷ್ಕರ ಯಶಸ್ವಿಗೊಳಿಸಬೇಕೆಂದು ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ.
Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...