ನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಮೈಸೂರು ದಸರಾ ಜಂಬೂ ಸವಾರಿಯಲ್ಲಿ 43 ಸ್ತಬ್ಧಚಿತ್ರಗಳ ಮೆರವಣಿಗೆ : ಚಂದ್ರಶೇಖರ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು:  ಈ ಬಾರಿಯ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾದಲ್ಲಿ ರಾಜ್ಯದ ಮತ್ತು ಜಿಲ್ಲೆಗಳ ಸಾಹಿತ್ಯ, ಸಂಸೃತಿ ಸಂಪ್ರದಾಯ ಬಿಂಬಿಸುವ ಸ್ತಬ್ಧಚಿತ್ರಗಳು ಜಂಬೂಸವಾರಿ ಮೆರವಣಿಗೆಯಲ್ಲಿ ವಿಜೃಂಬಿಸಲಿವೆ ಎಂದು ಸ್ತಬ್ಧಚಿತ್ರ ಉಪಸಮಿತಿ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.

ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ತಬ್ಧಚಿತ್ರ ಉಪಸಮಿತಿಯಿಂದ ಸೋಮನಾಥಪುರದ ಚನ್ನಕೇಶವ ದೇಗುಲ, ಆನೆಬಂಡಿ, ಆಜಾದಿ ಕಾ ಅಮೃತ ಮಹೋತ್ಸವದ ಸ್ತಬ್ಧಚಿತ್ರಗಳನ್ನು ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಸರ್ಕಾರದಿಂದ 25 ಲಕ್ಷ ರೂ. ಅನುದಾನ ಬಂದಿದೆ. ಇದರಲ್ಲೇ ಉತ್ತಮ ಸ್ತಬ್ಧಚಿತ್ರಗಳಿಗೆ 1 ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಮೆರವಣಿಗೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಇತಿಹಾಸ, ಪರಂಪರೆ ಸಾರುವ 31 ಸ್ತಬ್ಧಚಿತ್ರಗಳು, ಸ್ತಬ್ಧಚಿತ್ರ ಉಪಸಮಿತಿಯಿಂದ ಮೂರು ಹಾಗೂ ಸರ್ಕಾರದ ವಿವಿಧ ಇಲಾಖೆಗಳ 9 ಸ್ತಬ್ಧಚಿತ್ರಗಳು ಸೇರಿದಂತೆ ಒಟ್ಟು 43 ಸ್ತಬ್ಧಚಿತ್ರಗಳು ಸಾಗಲಿವೆ ಎಂದರು.

ರಾಜ್ಯದ ಪ್ರತಿ ಜಿಲ್ಲೆಯಿಂದ ಪಾಲ್ಗೊಳ್ಳುವ ಸ್ತಬ್ಧಚಿತ್ರಗಳು ಆಯಾ ಜಿಲ್ಲೆಯ ಭೌಗೋಳಿಕ, ಐತಿಹಾಸಿಕ ಮತ್ತು ಪ್ರಾಕೃತಿಕ ಅಂಶಗಳನ್ನೇ ವಿಷಯ ವಸ್ತುವನ್ನಾಗಿಸಿಕೊಂಡು ನಿರ್ಮಾಣಗೊಳ್ಳಲಿವೆ. ನೆರೆಯ ಜಿಲ್ಲೆಗಳಾದ ಚಾಮರಾಜನಗರದ ವನ್ಯಸಂಪತ್ತು, ಮಂಡ್ಯದ ಧಾರ್ಮಿಕ ಸ್ಥಳಗಳು, ಕೊಡಗು ಜಿಲ್ಲೆಯ ಕೊಡವರ ವೀರ ಪರಂಪರೆ, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳದ ಗೊಮ್ಮಟೇಶ್ವರ, ಉಡುಪಿ ಜನರ ಜೀವನಾಧಾರವಾದ ಮೀನುಗಾರಿಕೆ, ಉತ್ತರ ಕನ್ನಡದ ಪ್ರಾಕೃತಿಕ ಸೊಬಗು, ಚಿಕ್ಕಮಗಳೂರಿನ ಐತಿಹಾಸಿಕ ತಾಣಗಳು, ಶಿವಮೊಗ್ಗದಿಂದ ಶರಣಪರಂಪರೆಯ ಶ್ರೇಷ್ಠ ಶರಣರಾದ ಅಕ್ಕಮಹಾದೇವಿ ಮತ್ತು ಅಲ್ಲಮಪ್ರಭು ಮತ್ತಿತರ ಸ್ತಬ್ಧಚಿತ್ರಗಳು ಗಮನಸೆಳೆಯಲಿವೆ ಎಂದರು.

ಸ್ತಬ್ಧಚಿತ್ರಗಳ ತಯಾರಿಕೆ, ಬಹುಮಾನ ವಿತರಣೆ ಮತ್ತಿತರ ಖರ್ಚು ವೆಚ್ಚಗಳಿಗಾಗಿ ದಸರಾ ಮಹೋತ್ಸವ ಸಮಿತಿಗೆ 35 ಲಕ್ಷ ರೂ. ಅನುದಾನ ನೀಡಲು ಮನವಿ ಸಲ್ಲಿಸಲಾಗಿತ್ತು. ಆದರೆ, 25 ಲಕ್ಷ ರೂ. ನೀಡಿದೆ. ಅ.3ರ ಒಳಗೆ ಸ್ತಬ್ಧಚಿತ್ರ ನಿರ್ಮಾಣ ಪೂರ್ಣಗೊಳಿಸಲು ಗಡುವು ನೀಡಲಾಗಿದೆ.

ಉಪ ಸಮಿತಿಯ ಉಪ ವಿಶೇಷಾಧಿಕಾರಿ ಎಸ್.ಧನುಷ್, ಉಪಾಧ್ಯಕ್ಷಜೋಗಿ ಮಂಜು, ಕಾರ್ಯಾಧ್ಯಕ್ಷೆ ಮಾಲತಿ, ಸದಸ್ಯರಾದ ಪರಶುರಾಮಪ್ಪ, ಮಹಾದೇವಸ್ವಾಮಿ, ಮಂಜುನಾಥ್ ಮತ್ತಿತರರು ಹಾಜರಿದ್ದರು.

ಮೈಸೂರಿನ ಜಿಪಂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ತಬ್ಧಚಿತ್ರಗಳ ಮಾದರಿಯ ಪೋಸ್ಟರ್ ಅನ್ನು ಸ್ತಬ್ಧಚಿತ್ರ ಉಪಸಮಿತಿ ಅಧ್ಯಕ್ಷ ಚಂದ್ರಶೇಖರ್ ಬಿಡುಗಡೆ ಮಾಡಿದರು. ಉಪ ಸಮಿತಿಯ ಉಪ ವಿಶೇಷಾಧಿಕಾರಿ ಎಸ್.ಧನುಷ್, ಕಾರ್ಯಾಧ್ಯಕ್ಷೆ ಮಾಲತಿ, ಉಪಾಧ್ಯಕ್ಷ ಜೋಗಿ ಮಂಜು, ಸದಸ್ಯರಾದ ಪರಶುರಾಮಪ್ಪ, ಮಹಾದೇವಸ್ವಾಮಿ, ಮಂಜುನಾಥ್ ಇದ್ದರು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC