CrimeNEWSಆರೋಗ್ಯ

ವೈದ್ಯರ ನಿರ್ಲಕ್ಷ್ಯಕ್ಕೆ ಅಸುನೀಗಿದ ಏಳು ವರ್ಷದ ಗಂಡು ಮಗು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಏಳು ವರ್ಷದ ಗಂಡು ಮಗುವೊಂದು ವೈದ್ಯರ ನಿರ್ಲಕ್ಷ್ಯಕ್ಕೆ ಮೃತಪಟ್ಟಿರುವ ಅಮಾನವೀಯ ಘಟನೆ ನಗರದ ಸಂಪಂಗಿ ರಾಮನಗರದಲ್ಲಿ ನಡೆದಿದೆ.

ಆಡನ್ ಮೈಕಲ್ ಎಂಬ 7 ವರ್ಷ ಮಗುವಿಗೆ ಗಂಟಲು ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ಕೊಟ್ಟಿದ್ದ ಅನಸ್ತೇಷಿಯಾದಿಂದ (Anesthesia) ಆ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಸಂಪಂಗಿ ರಾಮನಗರದ ಸಿಂಧ್ಯಾ ಆಸ್ಪತ್ರೆಯ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

ಮಗು ಅಸುನೀಗಿದ ವಿಷಯ ತಿಳಿಯುತ್ತಿದ್ದಂತೆ ವೈದ್ಯರು ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದು, ಇತ್ತ ಮಗನನ್ನು ಕಳೆದುಕೊಂಡ ಪಾಲಕರು ಕಣ್ಣೀರಾಕುತ್ತಿದ್ದಾರೆ. ಆಡನ್ ಮೈಕಲ್‌ಗೆ ಊಟ ಮಾಡುವಾಗ ಗಂಟಲು ನೋವು ಕಾಣಿಸಿಕೊಳ್ಳುತ್ತಿತ್ತು. ಹೀಗಾಗಿ ನಾವು ಮಗನನ್ನು ಸಿಂಧ್ಯಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದೆವು. ಆ ವೇಳೆ ವೈದ್ಯರು ಮಗುವಿಗೆ ಆಪರೇಷನ್ ಮಾಡಬೇಕು ಎಂದಿದ್ದರು. ಅದಕ್ಕೆ ನಾವು ಒಪ್ಪಿಕೊಂಡಿದ್ದೆವು.

ಆದರೆ ಆಪರೇಷನ್ ವೇಳೆ ಡಾ.ಶ್ವೇತಾ ಪೈ ಎಂಬುವವರು ಆಡನ್ ಮೈಕಲ್‌ಗೆ ಅನೆಸ್ತೇಷಿಯಾ ಕೊಟ್ಟಿದ್ದು, ಬಳಿಕ ಮೃತಪಟ್ಟಿದ್ದಾನೆ. ಆದರೆ ಈ ವಿಷಯವನ್ನು ವೈದ್ಯರು ನಮಗೆ ತಿಳಿಸಿಲ್ಲ. ಬದಲಿಗೆ ಮಗುವಿಗೆ ಹೃದಯ ಸಮಸ್ಯೆಯಿದೆ ಎಂದು ನಾಟಕವಾಡಿದರು. ಈ ವಿಚಾರದಿಂದ ನಮಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದೆವು. ಪರಿಶೀಲನೆ ವೇಳೆ ಮಗು ಮೃತಪಟ್ಟಿರುವುದು ಗೊತ್ತಾಯಿತು ಎಂದು ಗೋಳಾಡುತ್ತಿದ್ದಾರೆ.

ಇನ್ನು ಅನಸ್ತೇಷಿಯಾ ನೀಡಿದ ಬಳಿಕ 3 ಇಂಜೆಕ್ಷನ್ ಕೊಟ್ಟಿದ್ದು ಓವರ್ ಡೋಸ್ ಆಗಿ ನಮ್ಮ ಮಗ ಮೃತಪಟ್ಟಿದ್ದಾನೆ ಎಂದು ಪಾಲಕರು ಆರೋಪ ಮಾಡಿದ್ದಾರೆ. ಆಸ್ಪತ್ರೆಯ ನಿರ್ಲಕ್ಷ್ಯದಿಂದಲೇ ಮಗು ಸತ್ತಿದೆ ಎಂದು ಕಿಡಿಕಾರಿದ್ದಾರೆ.

ಅಲ್ಲದೆ ನಮಗಾದ ನೋವು ಯಾರಿಗೂ ಆಗಬಾರದು, ನ್ಯಾಯ ಕೊಡಿಸಿ ಎಂದು ಗೋಳಾಡುತ್ತಿದ್ದಾರೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಮಗು ಕಳೆದುಕೊಂಡ ತಾಯಿ, ತಂದೆ ಕಣ್ಣೀರಾಕ್ತಿದ್ದಾರೆ.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ