NEWSನಮ್ಮಜಿಲ್ಲೆನಮ್ಮರಾಜ್ಯ

ನಾಲ್ಕೂ ಸಾರಿಗೆ ನಿಗಮಗಳಿಗೆ 828 ಸಾಮಾನ್ಯ 145 ವಿದ್ಯುತ್‌ ಚಾಲಿತ ಹೊಸ ಬಸ್‌ಗಳ ಸೇರ್ಪಡೆ: ಸಿಎಂ ಸಿದ್ದರಾಮಯ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಮ್ಮ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಸಭೆ ನಡೆಸಿ ಆ ಸಭೆಯಲ್ಲಿ ಆಯಾಯಾ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳ ಜತೆ ಚರ್ಚಿಸಿದರು.

ಶಕ್ತಿ ಯೋಜನೆ: ಶಕ್ತಿ ಯೋಜನೆ ರಾಜ್ಯದಲ್ಲಿ ಜಾರಿಯಾದಾಗಿನಿಂದ ನವೆಂಬರ್‌ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿದ್ದಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ.
ತಿಂಗಳ ಸರಾಸರಿ ಪ್ರಯಾಣಿಕರ ಸಂಖ್ಯೆ ಏಪ್ರಿಲ್‌ 2023 ರಲ್ಲಿ 84.17 ಲಕ್ಷ ಇದ್ದು, ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳ ವಾಗಿದೆ ಎಂದು ಮಾಹಿತಿ ನೀಡಿದರು.

ಅನ್ನಭಾಗ್ಯ: ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡುದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ ಎಂದು ತಿಳಿಸಿದರು.

7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಗಿದೆ. ಡಿಸೆಂಬರ್‌ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಗೃಹ ಜ್ಯೋತಿ: ಗೃಹಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ ಎಂದು ತಿಳಿಸಿದರು.

ಇನ್ನು ಆಗಸ್ಟ್‌ ನಿಂದ ಈ ವರೆಗೆ 2,900 ಕೋಟಿ ರೂ. ಭರಿಸಲಾಗಿದೆ. ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳನ್ನು ಇಲಾಖೆಯ ದತ್ತಾಂಶದಲ್ಲಿಯೇ ಗೃಹಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗದಂತೆ ಕ್ರಮ ವಹಿಸಬೇಕು ಎಂದರು.

ಗೃಹಲಕ್ಷ್ಮಿ ಯೋಜನೆ: ನವೆಂಬರ್‌ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರ ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದರು.

ಇನ್ನು ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್‌ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್‌ಕರ್‌, ರಾಮಲಿಂಗಾರೆಡ್ಡಿ, ಕೆ.ಎಚ್‌.ಮುನಿಯಪ್ಪ, ಕೆ,ಜೆ.ಜಾರ್ಜ್‌ ಮತ್ತು ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...