NEWS

ಸೆರೆ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಯನ್ನು ಅಟ್ಟಾಡಿಸಿದ ಕಾಡಾನೆ

ವಿಜಯಪಥ ಸಮಗ್ರ ಸುದ್ದಿ

ಕೊಡಗು: ಜಿಲ್ಲೆಯ ಸಿದ್ದಾಪುರ ಭಾಗದಲ್ಲಿ ಉಪಟಳ ಮಾಡುತ್ತಿದ್ದ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಆ ಆನೆ ಅರಣ್ಯ ಸಿಬ್ಬಂದಿ ಸೇರಿ ಕಾರ್ಯಾಚರಣೆಯಲ್ಲಿ ನಿರತರಾಗಿದ್ದ ಎಲ್ಲರನ್ನೂ ಅಟ್ಟಾಡಿಸಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಕರಡಿಗೋಡು ಭಾಗದಲ್ಲಿ ಹಲವು ತಿಂಗಳುಗಳಿಂದ ತೋಟದಲ್ಲಿ ಬೀಡುಬಿಟ್ಟು, ಕೃಷಿ ಫಸಲು‌ ನಾಶ ಮಾಡುತ್ತಿದ್ದ ಹಾಗೂ ಮಾನವನ ಮೇಲೆ ದಾಳಿಗೆ ಮುಂದಾಗುತ್ತಿದ್ದ ಸಲಗವನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಸೆರೆ ಹಿಡಿಯಲು ಬಂದ ಅರಣ್ಯ ಸಿಬ್ಬಂದಿ ಮೇಲೆ ದಾಳಿ ನಡೆಸಲು ಯತ್ನಿಸಿದೆ. ಇದರಿಂದ ವಿಚಲಿತರಾದ ಎಲ್ಲರೂ ದಿಕ್ಕಾಪಾಲಗಿ ಓಡಿದರು. ಆದರೂ ಆನೆ ಸೆರೆ ಹಿಡಿಯುವ ಕಾರ್ಯಾಚರಣೆ ಮುಂದುವರಿಸುತ್ತಿದ್ದಾರೆ.

ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದು, ವಿರಾಜಪೇಟೆ ವಲಯದಲ್ಲಿ ನಾಲ್ಕೂ ಆನೆಗಳ ಉಪಟಳ ಹೆಚ್ಚಾಗಿದೆ. ಹೀಗಾಗಿ ಆನೆ ಸೆರೆಗೆ ಅನುಮತಿ ದೊರೆತಿದ್ದು, ಮೊದಲ ಹಂತದಲ್ಲಿ ಸಿದ್ದಾಪುರದ ಕರಡಿಗೋಡು ಭಾಗದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ.

ದುಬಾರೆ ಸಾಕಾನೆ ಶಿಬಿರದ ಸಾಕಾನೆಗಳಾದ ಧನಂಜಯ, ಪ್ರಶಾಂತ, ಸುಗ್ರೀವ, ಮತ್ತಿಗೋಡು ಸಾಕಾನೆ ಶಿಬಿರದ ಅಭಿಮನ್ಯು, ಭೀಮ ಆನೆಗಳನ್ನು ಈ ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗುತ್ತಿದೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ