ಚಿತ್ರದುರ್ಗ: ಕಲುಷಿತ ನೀರು ಕುಡಿದು ಮಹಿಳೆಯೊಬ್ಬರು ಮೃತಪಟ್ಟಿದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಕವಾಡಿಗರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಗ್ರಾಮ ನಿವಾಸಿ ಮಂಜುಳಾ (32) ಮೃತಪಟ್ಟಿದ್ದು, ಸೃಷ್ಟಿ (18) ಎಂಬ ಯುವತಿಯ ಸ್ಥಿತಿ ಗಂಭೀರವಾಗಿದೆ. ಈಕೆಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಿಂದ 8 ಮಕ್ಕಳು ಅಸ್ವಸ್ಥರಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮಕ್ಕಳ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ಪಡೆಯುತ್ತಿರುವವರ ಸ್ಥಿತಿ ಗಂಭೀರ ಎಂದು ವೈದ್ಯರು ತಿಳಿಸಿದ್ದಾರೆ.