CrimeNEWSನಮ್ಮಜಿಲ್ಲೆ

ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಚಲಿಸುತ್ತಿದ್ದ ಖಾಸಗಿ ಬಸ್‌ನಿಂದ ಆಯ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ‌ ಎಂಬಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನಿನ್ನಿಕಲ್ ನಿವಾಸಿ ರಾಧ (66) ಮೃತ ಮಹಿಳೆ. ಬಸ್‌ ಒಳಗಿದ್ದ ಮಹಿಳೆ ಡೋರ್‌ ಬಳಿ ನಿಂತಿದ್ದಾಗ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಆ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

ಘಟನೆ ವಿವರ: ಜ.31ರಂದು ಬಸ್‌ನಲ್ಲಿ ರಾಧ ಕುಳಿತಿದ್ದಾಗ ಮತ್ತೊಬ್ಬ ಮಹಿಳೆ ಮಗುವನ್ನು ಎತ್ತಿಕೊಂಡು ಬಸ್ ಹತ್ತಿದ್ದರಿಂದ ಅವರಿಗೆ ರಾಧ ಅವರು ಸೀಟು ಬಿಟ್ಟುಕೊಟ್ಟಿದ್ದಾರೆ. ಈ ವೇಳೆ ಬಸ್‌ ಬಾಗಿಲು ಎದುರಿಗೆ ನಿಂತಿದ್ದ ಮಹಿಳೆ, ಸರಳು ಹಿಡಿಯುವ ವೇಳೆ ಕೈ ಜಾರಿ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಘಟನೆಯ ದೃಶ್ಯ ಬಸ್‌ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ರಾಧ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಬಸ್ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎಂದು ಮೃತ ಮಹಿಳೆಯ ಪುತ್ರಿ ಆರೋಪಿಸಿ, ದೂರು ನೀಡಿದ ಕಾರಣ ಚಾಲಕ ಮತ್ತು ನಿರ್ವಾಹಕನ ವಿರದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ