Please assign a menu to the primary menu location under menu

CrimeNEWSನಮ್ಮಜಿಲ್ಲೆ

ವಿಜಯಪುರ: ಚಲಿಸುತ್ತಿದ್ದ ಬಸ್​ಗೆ ಸಿಲುಕಿ ಹಾಸನದ ಯುವಕ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಚಲಿಸುತ್ತಿದ್ದ ಬಸ್​ನ ಹಿಂಬದಿ ಚಕ್ರಕ್ಕೆ ಸಿಲುಕಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ಈ ಯುವಕನ ಸಾವು ಆತಂಕದ ಜತೆಗೆ ಅಚ್ಚರಿಗೂ ಕಾರಣವಾಗಿದೆ.

ವಿಶ್ವನಾಥ ಶಂಕರಯ್ಯ (38) ಎಂಬಾತನೆ ಚಲಿಸುತ್ತಿದ್ದ ಬಸ್ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ‌ವ. ಬಸ್‌ ಬರುತ್ತಿದ್ದಂತೆ ಕೈಯಲ್ಲಿದ್ದ ಮೊಬೈಲ್‌ ಎಸೆದು ಏಕಾಏಕಿ ಬಸ್‌ ಚಕ್ರದ ಕೆಳಗೆ ಬಿದಿದ್ದಾನೆ.

ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಶ್ವನಾಥ ಮೂಲತಃ ಹಾಸನ‌ ಜಿಲ್ಲೆ ಅರಸೀಕೆರೆ ತಾಲೂಕಿನ ಮೂಲದವರು. ಆದ್ರೆ ಬಸ್‌ ಚಕ್ರಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ನಗರದ ಕೇಂದ್ರ ಬಸ್​ ನಿಲ್ದಾಣದ ಬಳಿ ಇರುವ ಟಿಪ್ಪು ಸುಲ್ತಾನ್​ ವೃತ್ತದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ರಸ್ತೆಬದಿ ಫೋನಿನಲ್ಲಿ ಮಾತನಾಡುತ್ತ ನಿಂತಿರುವ ಯುವಕ ಬಸ್​ ಬರುತ್ತಿದ್ದಂತೆ ಏಕಾಏಕಿ ತನ್ನ ಕೈಯಲ್ಲಿದ್ದ ಮೊಬೈಲ್​ ಎಸೆದು ಹಿಂಬದಿ ಚಕ್ರದಡಿ ಬಿದ್ದಿದ್ದಾನೆ.

ಈ ವೇಳೆ ತಲೆ ಮೇಲೆ ಚಕ್ರ ಹರಿದು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಈ ಎಲ್ಲ ದೃಶ್ಯಾವಳಿಗಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳಲೆಂದೇ ಯುವಕ ಹಿಂದಿನ ಚಕ್ರಕ್ಕೆ ತಲೆ ಕೊಟ್ಟಿದ್ಧಾನೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.

ಸ್ಥಳದಲ್ಲಿ ಯುವಕನ ಮೊಬೈಲ್​ ಪತ್ತೆಯಾಗಿದ್ದು, ಯುವಕನ ಕುಟುಂಬಸ್ಥರ ಮೊಬೈಲ್ ಸಂಖ್ಯೆ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ