Please assign a menu to the primary menu location under menu

CrimeNEWSನಮ್ಮಜಿಲ್ಲೆ

ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಮೃತ, 35ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಲುಷಿತ ನೀರು ಸೇವಿಸಿ ಯುವಕನೋರ್ವ ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ತಾಲೂಕು ಜಯಪುರ ಹೋಬಳಿಯ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಕನಕರಾಜು (23) ಮೃತ ಯುವಕ. ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡವರನ್ನು ಮೈಸೂರಿನ ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಐಸಿಯು‌ನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಶಾಸಕ ಜಿ.ಟಿ.ದೇವೇಗೌಡ ಸ್ಥಳಕ್ಕೆ ಭೇಟಿ ನೀಡಿದ್ದು ಕಲುಸಿತ ನೀರನ್ನು ಕೂಡಲೇ ನಿಲ್ಲಿಸಿ ಶುದ್ಧನೀರು ಸರಬರಾಜು ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಇನ್ನು ಈ ದುರ್ಘಟನೆಯ ಬೆನ್ನಲ್ಲೇ ಕೆ.ಸಾಲುಂಡಿ ಗ್ರಾಮಕ್ಕೆ ಡಿಎಚ್‌ಒ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಕಲುಷಿತ ನೀರು ಪೂರೈಕೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಗ್ರಾಮದಲ್ಲಿ ತಪಾಸಣೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಬಳಿಕ ಡಿಎಚ್‌ಒ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.

ಸದ್ಯ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮ ಜರುಗಿಸಲಾಗಿದೆ. ಕುಡಿಯುವ ನೀರಿನ ಬಗ್ಗೆ ಜನರು ಹೆಚ್ಚಿನ ಕಾಳಜಿ ವಹಿಸಬೇಕು. ಜತೆಗೆ ಸುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದಿಟ್ಟುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಎರಡು ಲಕ್ಷ ಪರಿಹಾರ: ಕಲುಷಿತ ನೀರು ಸೇವಿಸಿ ಮೃತಪಟ್ಟ ಕನಕರಾಜು ಮೃತ ಕುಟುಂಬಕ್ಕೆ ಮುಡಾ ಅಧ್ಯಕ್ಷ ಮರೀಗೌಡ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಈ ನಡುವೆ ಶಾಸಕ ಜಿ.ಟಿ.ದೇವೇಗೌಡ ಅವರು 1 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಮುಖ್ಯಮಂತ್ರಿಗಳು ಸೂಕ್ತ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.

ಇನ್ನು ಘಟನೆ ಸಂಬಂಧ ತಹಸೀಲ್ದಾರ್‌ ಗ್ರಾಮದಲ್ಲೇ ವಾಸ್ತವ್ಯ ಹೂಡಿದ್ದು, ಗ್ರಾಮಸ್ಥರಿಗೆ ಬೇಕಾದ ಆರೋಗ್ಯ ತಪಾಸಣೆಗಾಗಿ ವೈದ್ಯರ ವ್ಯವಸ್ಥೆಯನ್ನು ಮಾಡಿ ಗ್ರಾಮದ ಪ್ರತಿಯೊಬ್ಬರ ತಪಾಸಣೆಯನ್ನು ಮಾಡಲಾಗುತ್ತಿದೆ.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ