CrimeNEWSನಮ್ಮಜಿಲ್ಲೆ

ಅನ್ಯ ಜಾತಿ ಹುಡುಗನ ಪ್ರೀತಿಸುತ್ತಿದ್ದ ತಂಗಿ ಜತೆಗೆ ತಾಯಿಯನ್ನು ಕೆರೆಗೆ ತಳ್ಳಿ ಕೊಂದ ಅಣ್ಣ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಬೇರೆ ಜಾತಿಯ ಯುವಕನನ್ನು ಪ್ರೀತಿಸಿದ ತಂಗಿಯ ನಡೆ ವಿರೋಧಿಸಿದ ಅಣ್ಣನೊಬ್ಬ ತಂಗಿಯ ಜತೆಗೆ ತನ್ನ ತಾಯಿಯನ್ನು ಕೆರೆಗೆ ನೂಕಿ ಕೊಲೆ ಮಾಡಿರುವ ಘಟನೆಗೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಮರೂರು ಗ್ರಾಮದ ನಿವಾಸಿ ತಾಯಿ ಅನಿತಾ (43) ಹಾಗೂ ಸಹೋದರಿ ಧನುಶ್ರೀ (19) ಎಂಬುರೆನ್ನೆ ಕೆರೆಗೆ ತಳ್ಳಿದ್ದು, ಇಬ್ಬರು ಮೇಲೆ ಬರಲಾಗದೆ ನೀರಿನಲ್ಲಿ ಮುಳುಗಿ ಅಸುನೀಗಿದ್ದಾರೆ.

ಮಗ ನಿತಿನ್​​ ಈ ಕೃತ್ಯ ಎಸಗಿದ್ದು, ಸಹೋದರಿ ಅನ್ಯ ಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು ಎಂಬ ವಿಷಯ ಗೊತ್ತಾಗಿತ್ತು. ಈ ವೇಳೆ ಆತ ತನ್ನ ಸಹೋದರಿಗೆ ತಿಳಿ ಹೇಳಿದ. ಆ ಬಳಿಕ ಇಬ್ಬರ ನಡುವೆ ವೈಮನಸ್ಸು ಮೂಡಿತ್ತು. ಬಳಿಕ ತಂಗಿ ಮತ್ತು ತಾಯಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಕೆರೆ ಬಳಿಗೆ ಕರೆದುಕೊಂಡು ಹೋಗಿದ್ದಾನೆ.

ಏಕಾಏಕಿ ಸಹೋದರಿಯನ್ನು ಕೆರೆಗೆ ತಳ್ಳಲು ಮುಂದಾಗಿದ್ದನ್ನು ಗಮನಿಸಿದ ಆಕೆಯ ತಾಯಿ ಅನಿತಾ ಯುವತಿಯ ರಕ್ಷಣೆಗೆ ಮುಂದಾಗಿದ್ದಾರೆ. ಇಬ್ಬರು ಹಿಡಿದುಕೊಂಡ ಯುವಕರಮೊದಲು ಕೆರೆಗೆ ತಂಗಿಯನ್ನು ತಳ್ಳಿದ್ದಾನೆ. ಇದರಿಂದ ಇನ್ನಷ್ಟು ಗಾಬರಿಗೊಂಡ ತಾಯಿ ತಕ್ಷಣ ಮಗಳ ರಕ್ಷಣೆಗೆ ಮುಂದಾಗಿದ್ದಾಳೆ. ಈ ವೇಳೆ ತಾಯಿಯನ್ನು ಕೂಡ ಕೆರೆಗೆ ತಳ್ಳಿದ್ದಾನೆ.

ಕೆರೆ ನೀರಿನಲ್ಲಿ ಬಿದ್ದ ತಾಯಿ, ಮಗಳು ಇಬ್ಬರು ಮೇಲೆ ಬರಲಾಗದೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ.

ಈ ಘಟನೆ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ