CrimeNEWSನಮ್ಮಜಿಲ್ಲೆಬೆಂಗಳೂರು

ಹೊಸ ವರ್ಷ, ಜನುಮ ದಿನ ಆಚರಿಸಿಕೊಳ್ಳಲು ಹೋದ ಯುವಕ ಸ್ನೇಹಿತರಿಂದಲೇ ಹೆಣವಾದ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗೆಳೆಯರೊಂದಿಗೆ ಹೊಸ ವರ್ಷ ಸಂಭ್ರಮವನ್ನು ಹಂಚಿಕೊಳ್ಳಲು ಹೋಗಿದ್ದ ಯುವಕ ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರ ನಡುವೆ ನಡೆದ ಗಲಾಟೆಯಲ್ಲಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹನುಮಂತ ನಗರದ 80 ಅಡಿ ರಸ್ತೆಯಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ವಿಜಯ್ (21) ಎಂಬಾತ ರಕ್ತದ ಮಡುವಿನಲ್ಲಿ ಒದ್ದಾಡಿ ಅಸುನೀಗಿದ್ದಾನೆ. ಸ್ನೇಹಿತರಿಂದಲೇ ಈತನ ಕೊಲೆಯಾಗಿದೆ ಎಂದು ತಿಳಿದುಬಂದಿದೆ. ಕುಡಿದ ಮತ್ತಿನಲ್ಲಿ ಆಟೋದಲ್ಲಿ ಬಂದು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ.

ಇತ್ತ ಮಗ ಹೊಸ ಬಟ್ಟೆ ಧರಿಸಿಕೊಂಡು ಮನೆಯಿಂದ ಬರ್ತ್ ಡೇ ಎಂದು ಹೇಳಿ ಹೋಗಿದ್ದ. ತಡರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಈನಡುವೆ ರಾತ್ರಿ ಪೊಲೀಸರು ನಿಮ್ಮ ಮಗ ಕೊಲೆ ಆಗಿದ್ದಾನೆ ಎಂದು ಫೋನ್ ಮಾಡಿದ್ದರು ಎಂದು ವಿಜಯ್‌ ಅಮ್ಮ ಗೋಳಾಡುತ್ತಿದ್ದರು.

ನ್ಯೂ ಇಯರ್​ ರಾತ್ರಿಯೇ ಈ ಭೀಕರ ಹತ್ಯೆ ನಡೆದಿದ್ದು, ಮಾರಕಾಸ್ತ್ರಗಳಿಂದ ಇರಿದು ವಿಜಯ್‌ಅನ್ನು ಕೊಲೆ ಮಾಡಲಾಗಿದೆ. ಹತ್ಯೆಯಾದ ವಿಜಯ್ ಭಾನುವಾರ ಸಂಜೆ ಗೆಳೆಯರ ಜೊತೆ ಬರ್ತಡೇ ಹಾಗೂ ನ್ಯೂ ಇಯರ್ ಸೆಲೆಬ್ರೇಷನ್​ಗೆ ಹೋಗಿದ್ದ. ಪಾರ್ಟಿ ಮುಗಿಸಿಕೊಂಡು ಮನೆಗೆ ಹೋಗುವಾಗ ವಿಜಯ್ ಹಾಗೂ ಗೆಳೆಯರ ಮಧ್ಯೆ ಜಗಳ ಶುರುವಾಗಿದೆ.

ಈ ವೇಳೇ ಆಟೋದಲ್ಲಿ ಹೋಗುವಾಗ ವಿಜಯ್ ಹಾಗೂ ಸ್ನೇಹಿತರು ಜಗಳ ಮಾಡಿಕೊಂಡಿದ್ದು, ಸ್ನೇಹಿತರಲ್ಲೇ ಒಬ್ಬ ವಿಜಯ್ ಎದೆಗೆ ಚಾಕು ಇರಿದಿದ್ದಾನೆ. ಚಾಕು ಇರಿದ ಬಳಿಕ ಶ್ರೀನಿವಾಸ್ ನಗರ ಬಸ್ ನಿಲ್ದಾಣದ ಮುಂದೆ ವಿಜಯ್​ನನ್ನು ಬಿಸಾಕಿ ಪರಾರಿಯಾಗಿದ್ದಾರೆ. ಇರಿತಕ್ಕೊಳಗಾದ ವಿಜಯ್‌ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಅಸುನೀಗಿದ್ದಾನೆ.

ಮಗ ಹತ್ಯೆಯಾಗಿರುವ ವಿಷಯ ತಿಳಿಯುತ್ತಿದ್ದಂತೆ ವಿಜಯ್ ತಾಯಿ ಕಣ್ಣೀರು ಇಟ್ಟಿದ್ದಾರೆ. ನನಗೆ ಒಬ್ಬನೇ ಮಗ. ಯಾರು ಕೊಲೆ ಮಾಡಿದ್ದಾರೆ ಎಂದು ಗೊತ್ತಿಲ್ಲ. ನನ್ನ ಮಗ ಕೂಲಿ ಕೆಲಸ ಮಾಡುತ್ತಿದ್ದ. ಮಗ ಇಲ್ಲ ಅಂದರೆ ನಮಗೆ ಯಾರು ಗತಿ. ಮನೆಯಿಂದ ಹೊರಡುವಾಗ 50 ರೂಪಾಯಿ ತೆಗೆದುಕೊಂಡು ಹೋಗಿದ್ದ. ಅಲ್ಲಿ ಹೋದಾಗ ಏನಾಯ್ತೋ ಗೊತ್ತಿಲ್ಲ ಎಂದು ಕಣ್ಣೀರು ಇಟ್ಟಿದ್ದಾರೆ.

ಹತ್ಯೆ ಸಂಬಂಧ ಹನುಮಂತ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಹತ್ಯೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ