CrimeNEWSನಮ್ಮಜಿಲ್ಲೆ

ಪ್ರಿಯಕರ ಕೈಕೊಟ್ಟಿದ್ದಕ್ಕೆ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಪ್ರಿಯಕರ ಕೈಕೊಟ್ಟಿದ್ದಕ್ಕೆ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆ.ಆರ್. ನಗರದ ಗೌಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ನಿಸರ್ಗ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ನಿಸರ್ಗ ಆತ್ಮಹತ್ಯೆಗೂ ಮುನ್ನ ನನ್ನ ಸಾವಿಗೆ ಅನನ್ಯ, ಸುಹಾಸ್ ಹಾಗೂ ಆತನ ತಂದೆ ಗೋಪಾಲಕೃಷ್ಣ ಕಾರಣ ಎಂದು ಡೆತ್​ ನೋಟ್​ ಬರೆದಿಟ್ಟಿದ್ದಾರೆ.

ನಾಲ್ಕು ವರ್ಷದ ಪ್ರೀತಿ: ನಿಸರ್ಗ ಕೆ.ಆರ್. ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಈ ವೇಳೆ ಸುಹಾಸ್ ರೆಡ್ಡಿ ಎಂಬಾತನನ್ನು ಪ್ರೀತಿಸುತ್ತಿದ್ದಳು. 4 ವರ್ಷದಿಂದ ಪ್ರೀತಿಸಿ ಎಲ್ಲ ಕಡೆ ಸುತ್ತಾಡಿದ್ದರು. ಆದರೆ ಸುಹಾಸ್​ ನಿಸರ್ಗಳಿಗೆ ಕೈಕೊಟ್ಟು ಮತ್ತೊಬ್ಬ ಯುವತಿಯ ಪ್ರೀತಿಗೆ ಬಿದ್ದಿದ್ದನು.

ಇದರಿಂದ ಮನನೊಂದಿದ್ದ ನಿಸರ್ಗ ಸುಹಾಸ್ ತಂದೆ ತಾಯಿಗೆ ವಿಚಾರ ಹೇಳಿದರೂ ಸ್ಪಂದಿಸಲಿಲ್ಲ. ಈ ವಿಚಾರವಾಗಿ ಅವಮಾನಿಸದರೆಂದು ನಿಸರ್ಗ ಡೆತ್ ನೋಟ್‌ನಲ್ಲಿ ಬರೆದಿದ್ದಾಳೆ. ನನ್ನ ಸಾವಿಗೆ ಅನನ್ಯ, ಸುಹಾಸ್ ಹಾಗೂ ತಂದೆ ಆತನ ಗೋಪಾಲಕೃಷ್ಷ ಕಾರಣ. ಅವರನ್ನು ಸುಮ್ಮನೆ ಬಿಡಬೇಡಿ ಅಪ್ಪ, ನನ್ನನ್ನು ಕ್ಷಮಿಸಿಬಿಡಿ ಎಂದು ಯುವತಿ ವಿಷ ಸೇವಿಸಿದ್ದಾಳೆ.

ರೀಲ್ಸ್ ಮಾಡಿದ ನಿಸರ್ಗ: ಇನ್ನು ಈ ಮುನ್ನ ನಿಸರ್ಗ ಕೈ ಕೊಯ್ದುಕೊಂಡು ರೀಲ್ಸ್ ಮಾಡಿದ್ದಾಳೆ. ಬಳಿಕ ವಿಷ ಸೇವಿಸಿದ್ದಾಳೆ. ನಂತರ ಈ ವಿಚಾರ ಮನೆಯವರಿಗೆ ತಿಳಿಯುತ್ತಿದ್ದಂತೆ ನಿಸರ್ಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ.

ಈ ಪ್ರಕರಣ ಸಂಬಂಧ ಐವರ ವಿರುದ್ಧ ಕೆ.ಆರ್. ನಗರ ಪೊಲೀಸರು ಎಫ್​ಐಆರ್​ ದಾಖಲಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...