ಕಲಬುರಗಿ: ಅನ್ಯ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದು, ಆ ಪ್ರೀತಿಯನ್ನು ಪ್ರಿಯತಮನ ಕುಟುಂಬ ನಿರಾಕರಿಸಿದ್ದಕ್ಕೆ ಮನನೊಂದ UPSC ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಹೊರವಲಯ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.
ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಪುಷ್ಪಾ ಯಲ್ಲಾಲಿಂಗ ಕಾಲೋನಿಯಲ್ಲಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದಳು. UPSC ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದಳು.
UPSC ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದರ ನಡುವೆಯೇ ನಾಲ್ಕು ವರ್ಷಗಳಿಂದ ಗಾಂಧಿನಗರ ನಿವಾಸಿ ಕಿರಣ್ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ.
ಇನ್ನು ಕೆಲ ದಿನಗಳಿಂದ ಪುಷ್ಪಾ ಮದುವೆ ಆಗೋಣ ಎಂದು ಕಿರಣ್‌ಗೆ ಒತ್ತಾಯ ಮಾಡಿದ್ದಾಳೆ. ಆದರೆ ಕಿರಣ್ ಮನೆಯವರು ಅನ್ಯ ಜಾತಿ ಯುವತಿ ಎಂದು ಮದುವೆಯನ್ನು ನಿರಾಕರಿಸಿದ್ದಾರೆ. ಮನೆಯವರು ನಿರಾಕರಿಸಿದ್ದರಿಂದ ಯುವಕ ಕೂಡ ಒಪ್ಪಿಲ್ಲ.
ಆದರೆ ಈಗಲೇ ಮದುವೆ ಬೇಡವೆಂದು ಕಿರಣ್ ಪುಷ್ಪಾಳ ಮನವೊಲಿಸಲು ಮುಂದಾಗಿದ್ದನು. ಇದರಿಂದ ಮನನೊಂದು ಪುಷ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ.
ಆತ್ಮಹತ್ಯೆ ಸಂಬಂಧ ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿಲದ್ದಾರೆ.