NEWSನಮ್ಮಜಿಲ್ಲೆರಾಜಕೀಯ

ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಆಮ್‌ ಆದ್ಮಿ ಪಾರ್ಟಿ ದೂರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿ ಅಹವಾಲು ಸಲ್ಲಿಸಲು ಯತ್ನಿಸಿದ ಮಹಿಳೆಯನ್ನು ನಿಂದಿಸಿದ್ದಲ್ಲದೇ, ಆಕೆಯನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಅರವಿಂದ್‌ ಲಿಂಬಾವಳಿ ವಿರುದ್ಧ ಆಮ್‌ ಆದ್ಮಿ ಪಾರ್ಟಿಯು ಮಹಿಳಾ ಆಯೋಗಕ್ಕೆ ದೂರು ನೀಡಿತು.

ಇದೇ ಮಾಧ್ಯಮಗಳ ಜೊತೆ ಮಾತನಾಡಿದ ಬೆಂಗಳೂರು ನಗರ ಎಎಪಿ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಅರವಿಂದ್‌ ಲಿಂಬಾವಳಿಯವರ ದರ್ಪ ಮಿತಿಮೀರಿದೆ. ರಾಜಕಾಲುವೆ ಒತ್ತುವರಿ ಸಂಬಂಧ ದೂರು ನೀಡಲು ಆಗಮಿಸಿದ ಮಹಿಳೆಯನ್ನು ಲಿಂಬಾವಳಿ ನಿಂದಿಸಿದ್ದಾರೆ.

ಅಧಿಕಾರ ದುರ್ಬಳಕೆ ಮಾಡಿಕೊಂಡು ಪೊಲೀಸರ ಮೇಲೆ ಪ್ರಭಾವ ಮೀರಿ ಆಕೆಯ ಬಂಧನವಾಗುವಂತೆ ಮಾಡಿದ್ದಾರೆ. ಜನರ ಸಮಸ್ಯೆಯನ್ನು ಆಲಿಸುವ ಸೌಜನ್ಯವಿಲ್ಲದ ಲಿಂಬಾವಳಿಯವರು ಶಾಸಕರಾಗಿರುವುದು ಕ್ಷೇತ್ರದ ದುರಾದೃಷ್ಟ” ಎಂದು ಹೇಳಿದರು.

“ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪೊಲೀಸರು ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಜನರ ಸಮಸ್ಯೆ ಆಲಿಸುವ ಬದಲು ಅವರ ವಿರುದ್ಧವೇ ಕ್ರಮಕೈಗೊಂಡಿರುವುದು ಖಂಡನೀಯ. ಸಂತ್ರಸ್ತ ಮಹಿಳೆ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣವನ್ನು ರದ್ದು ಪಡಿಸಬೇಕು. ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿದ ಲಿಂಬಾವಳಿ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು. ಅರವಿಂದ್‌ ಲಿಂಬಾವಳಿಯವರು ಸಮಸ್ತ ಮಹಿಳೆಯರ ಕ್ಷಮೆ ಕೇಳಬೇಕು” ಎಂದು ಕುಶಲಸ್ವಾಮಿ ಆಗ್ರಹಿಸಿದರು.

ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಮುಖಂಡರಾದ ಉಷಾ ಮೋಹನ್‌, ವೀಣಾ ಮಹಾಲಿಂಗಂ, ರಮ್ಯ, ಸುವರ್ಣ, ಕರಗಮ್ಮ ಮತ್ತಿತರ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ