ಬೆಂಗಳೂರು: ಆಮ್ ಆದ್ಮಿ ಪಾರ್ಟಿ ಕರ್ನಾಟಕದ ಉಸ್ತುವಾರಿ ದಿಲೀಪ್ ಪಾಂಡೆ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಹಾಗೂ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರೊಂದಿಗೆ ಜೂನ್ 8 ರಂದು ಶನಿವಾರ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನಿ ತಿಳಿಸಿದ್ದಾರೆ.
ನಗರದ ಅಲುಮ್ನಿ ಅಸೋಸಿಯೇಷನ್ ಯುವಿಸಿಇಯಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪ್ರಸ್ತುತ ರಾಜಕೀಯ ಬೆಳವಣಿಗೆ ಹಾಗೂ ಕರ್ನಾಟಕದಲ್ಲಿ ಪಕ್ಷದ ಮುಂದಿನ ರೂಪು ರೇಷೆ ಕುರಿತಾಗಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ರಾಜ್ಯ ಸಮಿತಿಯ ಎಲ್ಲ ಪದಾಧಿಕಾರಿಗಳು, ಎಲ್ಲ ಘಟಕದ ರಾಜ್ಯಾಧ್ಯಕ್ಷರು, ಎಲ್ಲಾ ಜಿಲ್ಲೆಯ ಜಿಲ್ಲಾಧ್ಯಕ್ಷರು ಭಾಗವಹಿಸಲಿದ್ದು, ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದರು.